ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿದ ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಓರ್ವ ಯೋಧ ಸೇರಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ 160 ಅಡಿ ಕಂದಕಕ್ಕೆ ಸೇನಾ ವಾಹನ ಉರುಳಿದ್ದು, ಘಟನೆಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ. 160 ಅಡಿ ಕಂದಕಕ್ಕೆ ಈ ವಾಹನ ಉರುಳಿದೆ. ಮೃತರ ಪೈಕಿ ಓರ್ವ ಯೋಧ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ಧರ್ಮರಾಜ ಸುಭಾಷ ಖೋತ ಕೂಡ ಹುತಾತ್ಮರಾಗಿದ್ಧಾರೆ.