ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೇಭಾವಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ವಿಜಯಪುರ ತಾಲೂಕಿನ ಅಲಿಯಾಬಾದ್ ನಿವಾಸಿಗಳೆಂದು ಗುರುತಿಸಲಾಗಿದ್ದು, ಇಬ್ಬರು ಮಹಿಳೆಯರು ಸೇರಿ ಐವರು ಮೃತಪಟ್ಟಿದ್ದಾರೆ. ಹುಣಸಗಿಯಿಂದ ತಾಳಿಕೋಟೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತರನ್ನು ನಿಂಗಪ್ಪ ಪಾಟೀಲ್ (55) ಶಾಂತಪ್ಪ ಪಾಟೀಲ್(45), ಭೀಮಶಿ ಸಂಕನಾಳ(65) ಶಶಿಕಲಾ(50) ದಿಲೀಪ್ ಪಾಟೀಲ್ (45) ಎಂದು ಗುರುತಿಸಲಾಗಿದೆ. ಕಾರು ಮತ್ತು ಕಬ್ಬು ಕಟಾವು ಮಷಿನ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮದುವೆಗೆ ಹುಡುಗಿ ನೋಡಲು ಹೋಗಿ ವಾಪಸ್ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಸ್ಥಳಕ್ಕೆ ಎಸ್ ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿದ್ದಾರೆ.