ದೇಶ ರಕ್ಷಣೆಗಾಗಿ ಸೇವೆ ಸಲ್ಲಿಸಿದ ಮಾಜಿ ಸೈನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ಸುವರ್ಣಸೌಧದ ಎದುರಿನ ಸುವರ್ಣ ಗಾರ್ಡನನಲ್ಲಿ ಅಖಿಲ ಭಾರತೀಯ ಮಾಜಿ ಸೈನಿಕರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯನ್ನು ನಡೆಸಿ ಸರ್ಕಾರದ ಗಮನ ಸೆಳೆಯಲಾಯಿತು.
ದೇಶ ರಕ್ಷಣೆಗಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಸೈನಿಕರಿಗೆ ಜಮೀನು ಅಥವಾ ಸೈಟು ನೀಡಬೇಕೆಂದು ಆದೇಶವಿದ್ದರೂ ಸಹ ಇಲ್ಲಿಯವರೆಗೂ ಯಾವುದೇ ಮಾಜಿ ಸೈನಿಕರಿಗೆ ಸೈಟ್ ಅಥವಾ ಜಮೀನನ್ನ ನೀಡಿಲ್ಲ. ಯಾವುದೇ ಸೌಲಭ್ಯವನ್ನು ಪಡೆಯಲು ಮಾಜಿ ಸೈನಿಕರು ಹಲವಾರು ಕಾರ್ಯಾಲಯಗಳನ್ನ ಸುತ್ತುವ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ನೌಕರಿಗಳಲ್ಲಿಯೂ ಶೇಕಡ ಹತ್ತರಷ್ಟು ಮೀಸಲಾತಿ ನೀಡಬೇಕು ಎಂದಿದ್ದರೂ ಸಹ ಅದನ್ನ ಪಾಲಿಸುತ್ತಿಲ್ಲ. ಮಾಜಿ ಸೈನಿಕರಿಗೆ ಶೇಕಡಾ 2 ರಿಂದ 3 ರಷ್ಟು ಮಾತ್ರ ಅವಕಾಶ ನೀಡಲಾಗುತ್ತಿದೆ.
ದೇಶ ರಕ್ಷಣೆಗಾಗಿ ಹೋರಾಡಿದ ಮಾಜಿ ಸೈನಿಕರನ್ನು ಬೀದಿಗಿಳಿದು ಹೋರಾಟ ಮಾಡಲು ಅವಕಾಶ ನೀಡಬಾರದು. ಸರ್ಕಾರ ಮಾಜಿ ಸೈನಿಕರ ಸಮಸ್ಯೆಯನ್ನ ಪರಿಹರಿಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಸಪ್ಪ ತಳವಾರ ಆಗ್ರಹಿಸಿದರು.
ಈ ವೇಳೆ ರಾಜ್ಯದ ವಿವಿಧತೆಯಿಂದ ಮಾಜಿ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.