ನೆಲಮಂಗಲ ಭೀಕರ ಅಪಘಾತದಲ್ಲಿ ಸಾವೀಗೀಡಾಗಿದ್ದ 6 ಜನರ ಮೃತದೇಹಗಳು ಮಹಾರಾಷ್ಟ್ರದ ಸ್ವಗ್ರಾಮಕ್ಕೆ ತಲುಪಿದ್ದು, ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ. ಇಂದು ಬೆಳಿಗ್ಗೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ಮೃತದೇಹಗಳು ರವಾನೆಯಾಗಿವೆ. ಮೂರು ಅಂಬುಲೆನ್ಸ್ ಮೂಲಕ ಆರು ಮೃತದಹೇಗಳನ್ನು ಕರೆತರಲಾಗಿದೆ.
ಮೃತದೇಹಗಳನ್ನು ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಚಂದ್ರಮ್ ಅವರ ಜಮೀನಿನಲ್ಲಿ ಲಿಂಗಾಯತ ಸಮಾಜದ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು. ಮೃತದೇಹಗಳಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿದ ಬಳಿಕ ಬೆಂಕಿ ಸ್ಪರ್ಶಿಸುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು.