Chikkodi

ಮೂಲಭೂತ ಸೌಲಭ್ಯಗಳಿಂದ ವಂಚಿತವಾದ ಜೋಡಕುರಳಿ ಗ್ರಾಮ

Share

ಚಿಕ್ಕೋಡಿ:ಗ್ರಾಮಗಳು ಅಭಿವೃದ್ಧಿಯಾಗಲೆಂದು ಸರ್ಕಾರಗಳು ಕೋಟಿ ಕೋಟಿ ಹಣವನ್ನು ಬಿಡುಗಡೆ ಮಾಡುತ್ತವೆ. ಆದರೆ ಗ್ರಾಮಗಳು ಮಾತ್ರ ಇನ್ನೂ ವರೆಗೂ ಅಭಿವೃದ್ಧಿ ಆಗುವ ಲಕ್ಷಣಗಳು ಕಾಣುತ್ತಿಲ್ಲ,ಇಲ್ಲೊಂದು ಗ್ರಾಮದ ಜನರು ಮೂಲಸೌಲಭ್ಯಗಳಿಲ್ಲದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟಕ್ಕೂ ಆ ಗ್ರಾಮ ಯಾವುದು ಅಂತೀರಾ ಹಾಗಾದ್ರೆ ಈ ಸ್ಟೋರಿಯನ್ನು ನೋಡಿ

ಸಮರ್ಪಕ ರಸ್ತೆ ಇಲ್ಲದೆ ಕಲ್ಲು ಮುಳ್ಳಿನಲ್ಲಿ ಓಡಾಡುತ್ತಿರುವ ಗ್ರಾಮಸ್ಥರು, ಸಮರ್ಪಕ ಚರಂಡಿ ಇಲ್ಲದೆ ಗಬ್ಬು ವಾಸನೆ ಹೊಡೆಯುತ್ತಿರುವ ಗ್ರಾಮ, ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟಿಸುತ್ತಿರುವ ಮಹಿಳೆಯರು ಹೌದು ಹೀಗೊಂದು ದೃಶ್ಯ ಕಂಡು ಬಂದಿದ್ದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದ ನವಗ್ರಾಮದ ಅಂಬೇಡ್ಕರ್ ನಗರದಲ್ಲಿ ಕಳೆದ ಹಲವು ವರ್ಷಗಳ ಹಿಂದೆ ಇಲ್ಲಿ ನೂತನವಾಗಿ ನವಗ್ರಾಮವನ್ನು ನಿರ್ಮಾಣ ಮಾಡಲಾಗಿದೆ. ಆದರೆ ಈ ನವಗ್ರಾಮದಲ್ಲಿ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ, ಬಾವಿಗಳಿಗೆ ಹೋಗಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದಲ್ಲದೆ ಸಮರ್ಪಕ ರಸ್ತೆವಿಲ್ಲದೆ ಜನರು ಕಲ್ಲು,ಮುಳ್ಳು, ಗಿಡ ಗಂಟೆಗಳಲ್ಲಿ ಓಡಾಡುವ ಶೋಚನೀಯ ಪರಿಸ್ಥಿತಿ ಇವರದಾಗಿದೆ. ಅದಲ್ಲದೆ ಚರಂಡಿಗಳಿಲ್ಲದೆ ನೀರು ಮುಂದಕ್ಕೆ ಹೋಗದೆ ಅಲ್ಲಿಯೇ ನೀರು ನಿಂತು ರೋಗುರುಜನೆಗಳು ಹರಡುವ ಭಯಾನಕ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಪ್ರಧಾನಮಂತ್ರಿಯವರು ಮಹತ್ವಾಕಾಂಕ್ಷೆಯ ಯೋಜನೆ ಆದ ಜೆಜೆಎಮ್ ಕಾಮಗಾರಿಯು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಮನೆಗಳ ಮುಂದೆ ನಳಗಳನ್ನು ಕೂಡಿಸಿಲಾಗಿದೆ. ಆದರೆ ನಳಗಳಿಗೆ ಹನಿ ನೀರು ಬರದೆ ಕುಡಿಯುವ ನೀರಿಗಾಗಿ ಇಲ್ಲಿನ ಜನರು ಬಾವಿಗಳನ್ನೇ ಅವಲಂಬಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಈ ನವಗ್ರಾಮ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ನಾವು ಬಹಳಷ್ಟು ಸಂಕಷ್ಟವನ್ನು ಅನುಭವಿಸುತ್ತಿದ್ದೇವೆ. ಸ್ಥಳೀಯ ಗ್ರಾಮ ಪಂಚಾಯಿತಿನವರು ನಮಗೆ ಇಲ್ಲಿ ಅವಶ್ಯಕತೆ ಇರುವ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಇಲ್ಲವಾದರೆ ಮುಂದಿನ ದಿನಮಾನಗಳಲ್ಲಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಉಗ್ರವಾದ ಪ್ರತಿಭಟನೆಯನ್ನು ಮಾಡಲಾಗುವುದೆಂದು ಎಚ್ಚರಿಕೆಯನ್ನು ನೀಡಿದರು.

ಒಟ್ಟಿನಲ್ಲಿ ಜೋಡಕುರಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ನವಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ, ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಸ್ಥಳೀಯ ಗ್ರಾಮ ಪಂಚಾಯತ‌ನವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿ ಮೂಲಭೂತ ಸೌಕರ್ಯವನ್ನು ಒದಗಿಸುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ.

ಡಿ.ಕೆ‌‌.ಉಪ್ಪಾರ ಇನ್ ನ್ಯೂಸ್ ಚಿಕ್ಕೋಡಿ..

Tags:

error: Content is protected !!