ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಹಾಗೂ ವಿಶ್ವಗುರು ಬಸವಣ್ಣನವರ ಜನ್ಮಸ್ಥಳವಾದ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ವಿಫುಲ ಅವಕಾಶಗಳಿದ್ದು, ಜಿಲ್ಲೆಯು ಅಭಿವೃದ್ದಿ ಪಥದಲ್ಲಿ ಸಾಗುತ್ತಿದೆ. ನಗರ-ಜಿಲ್ಲೆ ಸೌಂದರ್ಯಿಕರಣ- ಅಭಿವೃದ್ದಿಯಲ್ಲಿ ಸಾರ್ವಜನಿಕರ ಪಾತ್ರ ಅತ್ಯಂತ ಮುಖ್ಯವಾಗಿದ್ದು, ಸಾರ್ವಜನಿಕರು ಜಿಲ್ಲೆಯ ಅಭಿವೃದಿಗೆ ಕೈ ಜೋಡಿಸಬೇಕು ಎಂದು ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.
ವಿಜಯಪುರ ಜಿಲ್ಲಾಡಳಿತ,ಪ್ರವಾಸೋದ್ಯಮ ಇಲಾಖೆ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಾಗೂ ರಿನ್ಯೂ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಇವರ ಸಹಯೋಗದಲ್ಲಿ ಗೋಳಗುಮ್ಮಟ ಸ್ಮಾರಕಕ್ಕೆ ಸೌರಶಕ್ತಿ ವಿದ್ಯತ್ ದೀಪಾಲಂಕರ ಲೋಕಾರ್ಪಣೆಗೊಳಿಸಿ ಮಾತಾನಾಡಿದ ಅವರು, ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರಕಿಸುವ ನಿಟ್ಟಿನಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.
400 ವರ್ಷಗಳ ಐತಿಹಾಸಿಕ ಗೋಲಗುಮ್ಮಟಕ್ಕೆ ರಿನಿವೆಬಲ್ ಎನರ್ಜಿ ಸಿಎಸ್ ಅರ್ ಅನುದಾನದಡಿ ದೀಪಾಲಂಕಾರ ವ್ಯವಸ್ಥೆಗೆ ಇಂದು ಚಾಲನೆ ನೀಡಲಾಗಿದೆ. ವಿಜಯಪುರ ನಗರ-ಜಿಲ್ಲೆಯ ಆಕರ್ಷಣೀಯ ಪ್ರವಾಸಿ ತಾಣವನ್ನಾಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದ್ದು, ಪ್ರವಾಸೋದ್ಯಮದಿಂದ ಜಿಲ್ಲೆಯ ವಾಪಾರ-ವಹಿವಾಟಿಗೆ ಉತ್ತೇಜನ ದೊರತು, ಉದ್ಯೋಗ ಸೃಷ್ಟಿಯೊಂದಿಗೆ ಆರ್ಥಿಕ ವ್ಯವಸ್ಥೆ ಸುಧಾರಣೆಯಾಗಲಿದೆ ಎಂದು ಅವರು ಹೇಳಿದರು. ವ್ಯಾಟಿಕನ್ ಸಿಟಿಯಲ್ಲಿರುವ ಸೇಂಟ್ ಪೀಟರ್ಸ್ ಚರ್ಚ್ ನಂತರ ವಿಶ್ವದ 2ನೇ ಅತಿ ದೊಡ್ಡ ಗೋಪುರ ಹೊಂದಿರುವ ಗೋಲಗುಮ್ಮಟ ವಿಜಯಪುರದಲ್ಲಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಈ ಐತಿಹಾಸಿಕ ಗೋಲಗುಮ್ಮಟಕ್ಕೆ ರೆನ್ಯೂ ಎನರ್ಜಿ ಪ್ರೈ.ಲಿ. ಸಿಎಸ್‍ಆರ್ ಅನುದಾನದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ಸೌರಶಕ್ತಿ ದೀಪಾಲಂಕಾರ ಅಳವಡಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯ ಐತಿಹಾಸಿಕ ಸ್ಮಾರಕಗಳಾದ ಗೋಲಗುಂಬಜ್ ಹಾಗೂ ಇಬ್ರಾಹಿಂರೋಜಾ ಸ್ಮಾರಕಗಳನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಗೊಳಿಸುವುದು ಬಹುಜನರ-ಬಹುದಿನಗಳ ಕನಸಾಗಿದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ. ಬಾವಡಿಗಳ ಒತ್ತುವರಿ ತೆರವುಗೊಳಿಸಲು, ಸಂರಕ್ಷಣೆ ಸ್ವಚ್ಛತೆಗೆ ಭಾರತೀಯ ಸರ್ವೇಕ್ಷಣಾ ಇಲಾಖೆ ಆದ್ಯತೆ ನೀಡಬೇಕು. ಇದರೊಂದಿಗೆ ಐತಿಹಾಸಿಕ ಸ್ಮಾರಕಗಳ ರಕ್ಷಣೆಗೂ ಒತ್ತು ನೀಡಲಾಗುತ್ತಿದೆ. ಬಾವಡಿಗಳ ನೀರನ್ನು ಇನ್ನಿತರ ಬಳಕೆ ಮಾಡುವ ನಿಟ್ಟಿನಲ್ಲಿ ಐತಿಹಾಸಿಕ ಬಾವಡಿಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಅರಣ್ಯೀಕರಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ವೃಕ್ಷಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.