ಕೇಂದ್ರ ಸಚಿವ ಅಮಿತ ಶಾ ಹೇಳಿಕೆ ಖಂಡಿಸಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಡಿ, 27 ರಂದು ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಬೃಹತ್ ಪ್ರತಿಭಟೆನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಮುಖಂಡರಾದ ಅಶೋಕ ಚಲವಾದಿ ಹಾಗೂ ಅರವಿಂದ ಸಾಲವಾಡಗಿ ಹೇಳಿದರು. ಬಸವನಬಾಗೇವಾಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯವದೊಂದಿಗೆ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ ಮುಖಂಡರು ಪದೇ ಪದೇ ಸಂವಿಧಾನ ವಿರೋಧಿ ಹೇಳಿಕೆ ನೀಡುವ ಮೂಲಕ ಸಮಾಜದ ಸ್ವಾಸ್ಥ್ಯವನ್ನ ಹಾಳು ಮಾಡುತ್ತಿದ್ದಾರೆ ಅಲ್ಲದೇ ಇತ್ತಿಚೆಗೆ ಸಂಸತ್ತಿನಲ್ಲಿ ಕೇಂದ್ರ ಸಚಿವ ಅಮಿತ ಶಾ ಅವರು ಬಾಬಾಸಾಹೇಬರ ಬಗ್ಗೆ ಹಗುರುವಾಗಿ ಮಾತನಾಡುವ ಮೂಲಕ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ ಕೂಡಲೇ ಅಮಿತ ಶಾ ಅವರನ್ನ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಗುರು ಗುಡಿಮನಿ, ಪರಶುರಾಮ ದಿಂಡವಾರ, ಮಹಾಂತೇಶ ಸಾಸಾಬಾಳ, ತಮ್ಮಣ್ಣ ಕಾನಾಗಡ್ಡಿ, ಮಹಾಂತೇಶ ಚಕ್ರವರ್ತಿ, ಮುತ್ತುರಾಜ ಬಾಗೇವಾಡಿ, ಗಂಗಾಧರ ಆರೇರ, ಯಮನಪ್ಪ ಚಲವಾದಿ ಸೇರಿದಂತೆ ಮುಂತಾದವರು ಇದ್ದರು.