ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡನೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯ ಚಡಚಣ, ಇಂಡಿ, ಮುದ್ದೇಬಿಹಾಳ, ಸಿಂದಗಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಂಚಮಸಾಲಿ ಮುಖಂಡರು, ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಚಡಚಣ, ಇಂಡಿಯಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಇಂಡಿ ಮಾಜಿ ಶಾಸಕ ರವಿಕಾಂತ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆಗ್ರಹಿಸಿದರು. ಸಿಎಂ ಸಿದ್ದರಾಮಯ್ಯ ಪಂಚಮಸಾಲಿ ಜಗದ್ಗುರುಗಳ ಕ್ಷಮೆ ಕೇಳುವಂತೆ ಆಗ್ರಹಿಸಿದರು.