ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರವರನ್ನು ಅವಮಾನಿಸಿದದಾರೆ ಎಂದು ಆರೋಪಿಸಿ ಹಾಗೂ ಕೆಂದ್ರ ಗೃಹ ಸಚಿವರು ಕ್ಷಮೆ ಕೇಳಲು ಆಗ್ರಹಿಸಿ, ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ನೇತೃತ್ವದಲ್ಲಿ ನಗರದ ವಿವೇಕಾನಂದ ವೃತದಲ್ಲಿ ಡಾ. ಬಿಆರ್ ಅಂಬೇಡ್ಕರವರ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದ ಕೈ ಮುಖಂಡರ ಹಾಗೂ ಕಾರ್ಯಕರ್ತರು ಕೇಂದ್ರ ಬಿಜೆಪಿ ಸೇರಿ ಗೃಹ ಸಚಿವರಾದ ಅಮಿತ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ನಾಯಕರು ಸಂವಿಧಾನ ಹಾಗೂ ಡಾ.ಬಿಆರ್ ಅಂಬೇಡ್ಕರವರ ಬಗ್ಗೆ ಬಹುದಿನಗಳಿಂದ ಹಗುರವಾಗಿ ಮಾತಾಡುತ್ತಲೇ ಬಂದಿದ್ದಾರೆ. ಈಗ ಸ್ವತಃ ಕೇಂದ್ರ ಗೃಹಸಚಿವರು ಸಂವಿಧಾನ ಶಿಲ್ಫಿ ಡಾ. ಬಾಬಾ ಸಹೇಬ ಅಂಬೇಡ್ಕರ ಕುರಿತು ಅವಮಾನಿಸೋ ರೀತಿಯಲ್ಲಿ ಮಾತಾಡಿದ್ದಾರೆ.
ಇದು ಖಂಡನೀಯವಾಗಿದ್ದು, ಈ ಕೂಡಲೇ ಕೇಂದ್ರ ಬಿಜೆಪಿ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ದೇಶದ ಜನತೆಗೆ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಕ್ಷಮೆ ಕೇಳದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದರು.