ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಶ್ರೀನಗರ ಕ್ರಾಸ್ ಬಳಿಯಲ್ಲಿ ಪಂಚಮಸಾಲಿ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಟೈರ್ ಗೆ ಬೆಂಕಿಗೆ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ಮಾಡುತ್ತಿರುವವರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸರ ಮೂಲಕ ಲಾಠಿ ಚಾರ್ಜ್ ಮಾಡಿದ್ದು ಖಂಡನೀಯ, ಪಂಚಮಸಾಲಿ ಮೀಸಲಾತಿ ಬೇಕೆ ಬೇಕು ಎಂದು ಪಟ್ಟು ಹಿಡಿದು ಆಗ್ರಹಿಸಿದರು.