ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಲೋಕಾರ್ಪಣೆಗೊಳಿಸಿದ್ದೇವೆ ಎಂದರು.
ಇನ್ನು ಇದೇ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮಾತನಾಡಿ. ಮೆಡಿಕಲ್ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಮಾಡಿ ಈ ಭಾಗಕ್ಕೆ ಅನುಕೂಲ ಮಾಡಿಕೊಟ್ಟಿದ್ದೀರಿ, ಇನ್ನೂ ಎರಡು ಮೂರು ಕೆಲಸಗಳು ಆಗಬೇಕಿದೆ. ಅದನ್ನು ನಾನು ನಿಮ್ಮ ಮುಂದೆ ಇಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯನವರಿಗೆ ನಿವೇದಿಸಿಕೊಂಡರು. ಈ ಭಾಗದಲ್ಲಿ ನಿಮ್ಹಾನ್ಸ್ ಇನ್ಸ್ಟಿಟ್ಯೂಟ್ ಶಾಖೆ ಕೇಳುತ್ತಿದ್ದೇವೆ. ಏಳು ಜನ ಎಂಪಿಗಳನ್ನು ಈ ಭಾಗದದಿಂದ ಆರಿಸಿಕೊಟ್ಟಿದ್ದೇವೆ. ಒಂದು ನಿಮ್ಹಾನ್ಸ್ ಕಲಬುರಗಿಗೆ ಆಗಲಿ ಎಂದು ಕೇಳಿಕೊಂಡಿದ್ದಾರೆ.
ಇವೆರಡು ಆದಲ್ಲಿ ಈ ಭಾಗದ ಜನರಿಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.ಗುಲಬುರ್ಗಾ ವಿಶ್ವವಿದ್ಯಾಲಯಗಳಲ್ಲಿ ಎಕ್ಸ್ಪರ್ಟ್ಗಳ ಕೊರೆ ಇದೆ, ಸಿಬ್ಬಂದಿಯ ಕೊರತೆಯಿದೆ ಈ ನಿಟ್ಟಿನಲ್ಲಿ ಸರ್ಕಾರ ವಿವಿಗೆ ಸಹಾಯ ಮಾಡಬೇಕು. ಪ್ರೋಫೆಸರ್ಗಳ ನೇಮಕಾತಿ ಮಾಡಿ ಅನೇಕ ಕೋರ್ಸ್ಗಳು ಬೆಳೆಯಬೇಕು. ಇವುಗಳ ವ್ಯವಸ್ಥೆಯನ್ನು ಮಾಡಬೇಕು ಎಂದು ಮಲ್ಲಿಕಾರ್ಜುನ್ ಖರ್ಗೆ ಸಿಎಂ ಅವರಲ್ಲಿ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.