ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ.ಇದೇ ವೇಳೆ ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಅದರಂತೆ ವಿಜಯಪುರ ಜಿಲ್ಲಾಡಳಿತ ವತಿಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಜಿಲ್ಲಾಡಳಿತ ಮುಂದೆ ಇರುವ ದ್ವಜವನ್ನು ಅರ್ಧಕ್ಕೆ ಹಾರಿಸಿ ಗೌರವ ನೀಡಲಾಯಿತು.