Vijaypura

ಅಪರಿಚಿತ ವಾಹನ ಡಿಕ್ಕಿ : ಬೈಕ್ ಸವಾರರು ಸ್ಥಳದಲ್ಲೇ ಸಾವು

Share

ವಿಜಯಪುರ  ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಸಮೀಪದ ನಾಗೋಡ ಕ್ರಾಸ್ ಬಳಿ ಸಂಭವಿಸಿದೆ.

ಇನ್ನೂ ಮೃತ ದುರ್ದೈವಿಗಳನ್ನ ತುಷಾರ್ ಜಾಧವ್ (34)
ಸಂತೋಷ ಹಿಂಗೋಲಿ(36) ಎಂದು ಗುರುತಿಸಲಾಗಿದೆ.
ಮೃತ ದುರ್ದೈವಿಗಳು ಸೋಮವಾರ ಸಂಜೆ ಮುತ್ತಗಿಯಿಂದ

ಬಸವನಬಾಗೇವಾಡಿಗೆ ಬೈಕ್ ಮೇಲೆ ಬರುವ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬಸವನಬಾಗೇವಾಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!