ಖಾನಾಪೂರ ತಹಶೀಲ್ದಾರ್ ಕಚೇರಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ತಹಶೀಲ್ದಾರ್ ಕಚೇರಿಯಲ್ಲಿ ಪ್ರಕಾಶ್ ಗಾಯಕವಾಡ ಅವರು ಮಹಾತ್ಮಾ ಗಾಂಧಿಜೀ ಹಾಗೂ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾಸಾಹೇಬ ಅಂಬೇಡ್ಕರ ಸೇರಿದಂತೆ ಶೂರ ಸಂಗೊಳ್ಳಿ ರಾಯಣ್ಣನ ಪೋಟೋ ಪೂಜೆ ಸಲ್ಲಿಸಿ,ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ 76ನೇ ಗಣರಾಜ್ಯೋತ್ಸವ ದಿನಾಚರಣೆ ಶುಭಾಶಯಗಳನ್ನು ಕೋರಿದರು ಅದರಂತೆಯೇ ಶಾಸಕ ವಿಠ್ಠಲ ಹಲಗೇಕರ ಅವರು ಶಾಂತಿನಿಕೇತನ ಶಾಲಾ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಿ ಉಪಸ್ಥಿತಿರನ್ನು ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು . ಅದರಂತೆಯೇ ಮಲಪ್ರಭಾ ಕ್ರೀಡಾಂಗಣದಲ್ಲಿ ಧ್ವಜ ವಂದನೆ ಸ್ವೀಕರಿಸಿದರು.ನಂತರ ತಾಲೂಕಿನ ಸಮಸ್ತ ಜನತೆಗೆ 76 ನೇ ಗಣರಾಜ್ಯೋತ್ಸವರ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಖಾನಾಪೂರ ವಲಯ ಅರಣ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ಎಸಿಎಫ್ ಸುನೀತಾ ನಿಂಬರಗಿ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಆರ್ ಎಫ್ ಒ ಶ್ರೀಕಾಂತ್ ಪಾಟೀಲ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಐತಿಹಾಸಿಕ ನಂದಗಡ ಪೋಲಿಸ್ ಠಾಣೆಯಲ್ಲಿ ಪಿಐ ಎಸ್.ಸಿ .ಪಾಟೀಲರು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು ಅದರಂತೆಯೇ ಖಾನಾಪೂರ ತಾಲೂಕಿನಾದ್ಯಂತ 76ನೇ ಗಣರಾಜ್ಯೋತ್ಸವ ದಿನಾಚರಣೆ ಸಡಗಡ ಸಂಭ್ರಮದಿಂದ ಆಚರಿಸಲಾಯಿತು.