ನಾಳೆ ಜನವರಿ 21 ರಂದು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ ಸಮಾರಂಭದ ಹಿನ್ನೆಲೆ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.
ದಿನಾಂಕ:21.01.2025 ರಂದು ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ ಸಮಾರಂಭದ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು (ಗ್ರಾಮೀಣ ಮತ್ತು ನಗರ) ಶೈಕ್ಷಣಿಕ ವಲಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಬೆಳಗಾವಿ ತಾಲೂಕಿನ ನಗರ ಯೋಜನೆ ಹಾಗೂ ಗ್ರಾಮೀಣ ಯೋಜನೆಯ ಎಲ್ಲಾ ಅಂಗನವಾಡಿಗಳಿಗೆ ದಿನಾಂಕ:21.01.2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.