Belagavi

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ

Share

 

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮತ್ತು ಬ್ಯೂಟಿ ಪಾರ್ಲರ ಸೆಂಟರ್ ಒಂದರ ಮೇಲೆ ದಾಳಿ ಮಾಡಿರುವ ಬೆಳಗಾವಿಯ ಸಿಇಎನ್ ಪೊಲೀಸರು 6 ಮಹಿಳೆಯರನ್ನು ರಕ್ಷಣೆ ಮಾಡುವ ಮೂಲಕ ಮಾಲೀಕರಳನ್ನು ವಶಕ್ಕೆ ಪಡೆದಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಅನಗೋಳದ ಮುಖ್ಯ ರಸ್ತೆಯಲ್ಲಿ ಇರುವ ಅಂಜಲಿ ಸ್ಪಾ ಮತ್ತು ಬ್ಯೂಟಿ ಪಾರ್ಲ ರ್ ಮೇಲೆ ಈ ದಾಳಿಯನ್ನು ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸ್ ಆಯುಕ್ತ ಹಾಗೂ ಉಪ ಆಯುಕ್ತರ ಮಾರ್ಗದರ್ಶನದಂತೆ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯ ಪಿಐ ಬಿ.ಆರ್. ಗಡ್ಡೇಕರ್ ಅವರ ನೇತ್ರತ್ವದಲ್ಲಿ ಈ ದಾಳಿ ನಡೆದಿದೆ.

ಈ ದಾಳಿ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 6 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಅಲ್ಲದೆ ಈ ವೇಶಾವಾಟಿಕೆ ಚಟುವಟಿಕೆಯಲ್ಲಿ ಜಿಲ್ಲೆಯ ಸಂಕೇಶ್ವರ ಪಟ್ಟಣದ ಹಾಗೂ ಕಾಕತಿಯ ಮಹಿಳೆ ಸೇರಿ ಅನಗೋಳದ ನಾಲ್ವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ಅಲ್ಲದೇ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮಾಲಿಕಿಯಾದ ಅಂಜಲಿ ಅವಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Tags:

error: Content is protected !!