hubbali

ಪ್ಲಾಸ್ಟಿಕ್ ಚೀಲದಲ್ಲಿ ಶಿಶುವಿನ ಶವ ಪತ್ತೆ : ಸ್ಥಳಕ್ಕೆ ಪೊಲೀಸರ ದೌಡು

Share

ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಪಾಟೀಲ್ ಗಲ್ಲಿಯಲ್ಲಿ ನವಜಾತ ಶಿಶುವಿನ ಶವ ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿರುವ ಘಟನೆ ಇಂದು ಬೆಳ್ಳಿಗ್ಗೆ ಬೆಳಕಿಗೆ ಬಂದಿದೆ.

ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಇರೋದನ್ನು ಕಂಡು ಬೆಂಡಿಗೇರಿ ಠಾಣೆಯ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಬೆಂಡಿಗೇರಿ ಠಾಣೆಯ ಪೊಲೀಸರು ನವಜಾತ ಶಿಶುವಿನ ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

ಬೆಂಡಿಗೇರಿ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಶಿಶುವಿನ ಶವವನ್ನು ಯಾರು ತಂದಿಟ್ಟಿದ್ದಾರೆ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ

Tags:

error: Content is protected !!