ಜೈ ಬಾಪೂ ಜೈ ಭೀಮ್ ಮತ್ತು ಜೈ ಸಂವಿಧಾನ ಸಮಾವೇಶದ ಹಿನ್ನೆಲೆ ಸುಮಾರು 1 ಲಕ್ಷ ಜನರಿಗೆ ಪ್ರತಿ 100 ಮೀಟರನಲ್ಲಿ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.

ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಗಾಂಧಿ ಭಾರತ ಕಾರ್ಯಕ್ರಮದ ಹಿನ್ನೆಲೆ ಭೋಜನ ವ್ಯವಸ್ಥೆಯನ್ನು ಮಾಡಲೂ ಸಚಿವ ಸಂತೋಷ ಲಾಡ್, ಸಚಿವರಾದ ವೆಂಕಟೇಶ್ ಇನ್ನುಳಿದವರ ಸಮಿತಿಯನ್ನು ರಚಿಸಿ, ತಮ್ಮನ್ನ ಅಧ್ಯಕ್ಷರನ್ನಾಗಿಸಿ ಸಿಎಂ ಮತ್ತು ಡಿಸಿಎಂ ಜವಾಬ್ದಾರಿಯನ್ನು ನೀಡಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಜನರಿಗೆ ಭೋಜನ ವ್ಯವಸ್ಥೆಯನ್ನು ಮಾಡಿದ್ದೇವೆ. ದಕ್ಷಿಣ ಮತ್ತು ಉತ್ತರ ಕರ್ನಾಟಕ ಸೇರಿದಂತೆ ಎಲ್ಲೆಡೆಯಿಂದ ಬರುವ ಜನರು ಬಸ್ ಇಳಿಯುತ್ತಿದ್ದಂತೆ 100 ಮೀಟರ್ ದೂರದಲ್ಲಿ 4-5 ಕಡೆ ಈ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಳಿಗ್ಗೆ 10 ರಿಂದ 2 ಗಂಟೆಯ ವರೆಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಬೆಳಿಗ್ಗೆ 10 ಗಂಟೆಗೆ ಸುವರ್ಣಸೌಧ ಎದುರು ಮಹಾತ್ಮಾ ಗಾಂಧಿಜೀಯವರ ಮೂರ್ತಿಯ ಅನಾವರಣ ನಡೆಯಲಿದೆ. ಅಲ್ಲಿಯ ಕೂಡ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಸುಮಾರು 12 ರಿಂದ 1 ಗಂಟೆಯ ವರೆಗೆ ಬೃಹತ್ ಸಮಾವೇಶ ನಡೆಯಲಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಸೇರಿದಂತೆ ಇನ್ನುಳಿದ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು.
ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.