ಅಡ್ಡಬಂದ ಬುಲೆಟಗೆ ಹೊಡೆಯುತ್ತಿದ್ದ ಡಿಕ್ಕಿಯನ್ನು ತಪ್ಪಿಸಲು ಹೋಗಿ ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ 25ಕ್ಕೂ ಅಧಿಕ ನರೇಗಾ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಹುಕ್ಕೇರಿ ತಾಲೂಕಿನ ಹೊಸೂರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹುಕ್ಕೇರಿ ತಾಲೂಕಿನ ಹೊಸೂರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್ ವಾಹನದ ಎದುರು ಬಂದ ಬುಲೆಟನನ್ನು ತಪ್ಪಿಸಲು ಹೋಗಿ ಗೂಡ್ಸ್ ವಾಹನ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಿಂದಾಗಿ ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ 25ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿವೆ. ತಲೆ ಹಾಗೂ ಕೈಕಾಲುಗಳಿಗೆ ಗಾಯವಾಗಿದ್ದು, ಓರ್ವ ಮಹಿಳೆಯ ಪರಿಸ್ಥಿತಿ ಗಂಭೀರವಾಗಿದೆ.
ಕೂಲಿ ಕಾರ್ಮಿಕರೆಲ್ಲರೂ ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಮ್ ಗೆ ನರೇಗಾ ಕೆಲಸಕ್ಕೆ ಹೊರಟಿದ್ದರು ಎನ್ನಲಾಗಿದೆ. ಗಾಯಾಳುಗಳಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕೆಲವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ನರೇಗಾ ಯೋಜನೆಯಡಿ ಪರಿಹಾರ ವಿತರಿಸಲಾಗುವುದು ಎಂದು ಹುಕ್ಕೇರಿಯ ಇ.ಓ. ಕೆ.ಆರ್, ಮಲ್ಲಾಡದ ತಿಳಿಸಿದರು.
ಯಮಕನಮರ್ಡಿ ಗ್ರಾಮದ ನರೇಗಾ ಕಾರ್ಮಿಕರು ಹಿಡಕಲ್ ಡ್ಯಾಂಗೆ ಹೋಗುವಾಗ ಸಂಗಮ ಸಕ್ಕರೆ ಕಾರ್ಖಾನೆ ಹತ್ತಿರ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಗಂಭೀರವಾಗಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಿರಣ ಸಿಂಗ್ ರಜಪೂತ್ ಹೇಳಿದರು.