Belagavi

ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಶ್ರೀ ಅಲ್ಲಮಪ್ರಭು ಸ್ವಾಮಿಜೀಗಳು ಮತ್ತು ಶ್ರೀ ಬಸವಪ್ರಕಾಶ ಸ್ವಾಮಿಜೀಗಳು

Share

ಕಾರ ಅಪಘಾತದಲ್ಲಿ ಗಾಯಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಾಗನೂರು ರುದ್ರಾಕ್ಷಿಮಠದ ಶ್ರೀ ಅಲ್ಲಮಪ್ರಭು ಸ್ವಾಮಿಜೀಗಳು ಮತ್ತು ಕೂಡಲ ಸಂಗಮದ ಶ್ರೀ ಬಸವಪ್ರಕಾಶ ಸ್ವಾಮಿಜೀಗಳು ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದರು.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆಳಗಾವಿಯ ವಿಜಯಾ ಹಾಸ್ಪಿಟಲನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ನಾಗನೂರು ರುದ್ರಾಕ್ಷಿಮಠದ ಶ್ರೀ ಅಲ್ಲಮಪ್ರಭು ಸ್ವಾಮಿಜೀಗಳು ಮತ್ತು ಕೂಡಲ ಸಂಗಮದ ಶ್ರೀ ಬಸವಪ್ರಕಾಶ ಸ್ವಾಮಿಜೀಗಳು ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ವಿಚಾರಿಸಿದರು.

ಈ ವೇಳೆ ಡಾ. ರವಿ ಪಾಟೀಲ್ ಅವರು ಶ್ರೀಗಳಿಗೆ ಹೆಚ್ಚಿನ ಮಾಹಿತಿಯನ್ನು ನೀಡಿದರು.

Tags:

error: Content is protected !!