ಕಾರಿನ ಟೈಯರ್ ಬ್ರಸ್ಟ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಭೀಕರವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ನಡೆದಿದೆ.
ಧಾರವಾಡದಿಂದ ಬೆಳಗಾವಿ ಕಡೆ ಬರುತ್ತಿದ್ದ ಕಾರಿನ ಟೈಯರ್ ಬ್ರಸ್ಟ್ ಆಗಿ ಮುಂದೆ ಹೋಗುತ್ತಿದ್ದ ಕುಕಡೊಳ್ಳಿ ಗ್ರಾಮದ ಬೈಕ್ ಸವಾರನ ಮೇಲೆ ಕಾರನ್ನು ಹತ್ತಿಸಿದ್ದಾರೆ. ಇದರಿಂದಾಗಿ ಬೈಕ್ ಸವಾರ ಸ್ಥಳದಲ್ಲೇ ಭೀಕರವಾಗಿ ಸಾವನ್ನಪ್ಪಿದ್ದಾನೆ. ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂದಿನ ಭಾಗ ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೋಲಿಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕ ಮಹಾರಾಷ್ಟ್ರದ ರಾಜ್ಯದ ಮುಂಬಯಿ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ.