Accident

ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರರು….

Share

ಸರ್ಕಾರಿ ಬಸ್ ಹಾಗೂ ಬೈಕ್ ಮದ್ಯ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ರಸ್ತೆಯಲ್ಲಿ ಸಂಭವಿಸಿದೆ. ಮೃತ ದುರ್ದೈವಿಗಳನ್ನ ಮಸಬಿನಾಳ ಗ್ರಾಮದ ಸಾಗರ ಬೈಚಬಾಳ( 21) ಸುದೀಪ ಗುದ್ದಿ (21) ಎಂದು ಗುರುತಿಸಲಾಗಿದೆ.

ಇನ್ನೂ ಮೃತ ದುರ್ದೈವಿಗಳು ಇಂಗಳೇಶ್ವರ ರಸ್ತೆಯಲ್ಲಿರುವ ತಮ್ಮ ತೋಟಕ್ಕೆ ಹೋಗಿ ಬರುವಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೈಕ್ ಬಸ್ ಗೆ ಗುದ್ದಿದ ರಬಸಕ್ಕೆ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದೆ ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಪೊಲೀಸರು ಭೇಟಿ ನೀಡಿದ್ದು ಬಸವನಬಾಗೇವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Tags:

error: Content is protected !!