ಕಾರ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯವನ್ನು ಸಭಾಪತಿ ಯು.ಟಿ.ಖಾದರ್ ವಿಚಾರಿಸಿದರು.

ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ನಡೆದ ಕಾರ ಅಪಘಾತದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಾಯಗೊಂಡಿದ್ದು, ಬೆಳಗಾವಿಯ ವಿಜಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಭಾಪತಿ ಯು.ಟಿ.ಖಾದರ್ ಅವರು ಆಸ್ಪತ್ರೆಗೆ ಆಗಮಿಸಿ ಸಚಿವೆ ಲಕ್ಷ್ಮ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ವಿಚಾರಿಸಿ, ಬೇಗ ಗುಣಮುಖರಾಗಲೆಂದು ಹಾರೈಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.