ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರ ವಿಶೇಷ ಪರಿಶ್ರಮದಿಂದ ಶಹಾಪೂರದ ಸರಸ್ವತಿ ಹೆಣ್ಣು ಮಕ್ಕಳ ಪ್ರೌಢ ಶಾಲೆಯ ಹೊಸ ಕಟ್ಟಡ ನಿರ್ಮಾಣ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ.

ಬೆಳಗಾವಿಯ ಶಹಾಪೂರದಲ್ಲಿರುವ ಸರಸ್ವತಿ ಹೆಣ್ಣು ಮಕ್ಕಳ ಪ್ರೌಢಶಾಲೆಯ ಹಳೆಯ ಕಟ್ಟಡವನ್ನು ನೆಲಸಮಗೊಳಿಸಲಾಗಿದ್ದು, 3.38 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಶಾಸಕ ಅಭಯ್ ಪಾಟೀಲ್ ಅವರ ನೇತೃತ್ವದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯೂ ಈಗ ಅಂತಿಮ ಹಂತಕ್ಕೆ ತಲುಪಿದ್ದು , ಮೇ ತಿಂಗಳಲ್ಲಿ ಕಟ್ಟಡವು ಲೋಕಾರ್ಪಣೆಗೊಳ್ಳಲಿದೆ, ಕಾಮಗಾರಿಯನ್ನು ಪರಿಶೀಲಿಸಿ ಗುತ್ತಿಗೆದಾರರಿಂದ ಶಾಸಕ ಅಭಯ್ ಪಾಟೀಲ್ ಅವರು ಮಾಹಿತಿಯನ್ನು ಪಡೆದುಕೊಂಡರು. ಗುಣಮಟ್ಟದ ಕಾಮಗಾರಿಯನ್ನು ಮಾಡುವಂತೆ ಸೂಚನೆಯನ್ನು ನೀಡಿದರು.