ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ವತಿಯಿಂದ ಇಂದು ಪ್ರತಿಭಟನೆಯನ್ನು ಕೈಗೊಂಡು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಗುರುವಾರದಂದು ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ವರೆಗೂ ಪ್ರತಿಭಟನಾ ರ್ಯಾಲಿಯನ್ನು ನಡೆಸಿ, ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ರಿಜ್ವಾನ್ ಅಹಮದ್ ಮಕಾಂನದಾರ ಅವರ ನೇತೃತ್ವದಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳ ಪರಿಸ್ಥಿತಿಯನ್ನು ಅರಿಯಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ನೌಕರನ್ನು ನೇಮಿಸಬೇಕು, ಬೆಂಚಗಳನ್ನು ಒದಗಿಸಬೇಕು. ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಆಡಿಟ್ ನಡೆಸಬೇಕು. ಡಿಜಿಟಲ್ ತಂತ್ರಜ್ಞಾನ ಬಳಕೆ, ಸರ್ಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳು, ಆಟದ ಮೈದಾನ, ಶುದ್ಧ ಕುಡಿಯುವ ನೀರು, ಸ್ವಚ್ಚ ಶೌಚಾಲಗಳನ್ನು ಹೊಂದಿರಬೇಕು. ಪ್ರತಿ ಮಗುವಿಗೆ ಸಮಾನ ಶಿಕ್ಷಣ ಗುಣಮಟ್ಟದ ಶಿಕ್ಷಣವು ಬಡ ವರ್ಗ, ಮಧ್ಯಮ ವರ್ಗ, ಅಥವಾ ಶ್ರೀಮಂತ ವರ್ಗದಿಂದ ಬಂದ ಪ್ರತಿಯೊಂದು ಮಗುವಿಗು ಲಭ್ಯವಾಗಬೇಕು. ಎಲ್ಲ ರೀತಿಯ ಸೌಲಭ್ಯಗಳನ್ನು ಸರ್ಕಾರಿ ಶಾಲೆಯ ಮಕ್ಕಳಿಗೆ ನೀಡಿ, ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಲಾಯಿತು.
1ನೇ ತರಗತಿಯಿಂದ 4ನೇ ತರಗತಿಯ ಮಕ್ಕಳು ಈಗಲೂ ಕೂಡ ನೆಲಕ್ಕೆ ಕುಳಿತು ಓದುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಮಕ್ಕಳನ್ನು ಅನಿವಾರ್ಯವಾಗಿ ಶುಲ್ಕ ಹೆಚ್ಚಾಗಿದ್ದರೂ ಕೂಡ ಖಾಸಗಿ ಶಾಲೆಗೆ ಕಳುಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಒಂದು ವೇಳೆ ಸರ್ಕಾರಿ ಶಾಲೆಗಳ ಪರಿಸ್ಥಿತಿಯನ್ನು ಅಭಿವೃದ್ಧಿ ಪಡಿಸಿದರೇ, ಪಾಲಕರ ಆರ್ಥಿಕಮಟ್ಟ ಸುಧಾರಿಸಿದಂತಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ರಿಜ್ವಾನ್ ಅಹ್ಮದ್ ಮಕಾನದಾರ್ ಹೇಳಿದರು. ಬೈಟ್
ಇನ್ನು ಬೆಳಗಾವಿಯಲ್ಲಿ ಸರ್ಕಾರ ಸುಮಾರು 200 ಕೋಟಿ ರೂಪಾಯಿ ವೆಚ್ಚ ಮಾಡಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿದೆ. ಆದರೇ ಇಲ್ಲಿಯವರೆಗು ಅದನ್ನ ಉದ್ಘಾಟಿಸಿಲ್ಲ. ಅದನ್ನ ಕೂಡಲೇ ಒಂದು ತಿಂಗಳೊಳಗೆ ಲೋಕಾರ್ಪಣೆಗೊಳಿಸಿ ರೋಗಿಗಳ ಹಿತವನ್ನು ಕಾಯಬೇಕು ಎಂದು ಜಿಲ್ಲಾಧ್ಯಕ್ಷರಾದ ವಿಜಯ ಪಾಟೀಲ್ ತಿಳಿಸಿದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು