ಧಾರವಾಡ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಸ್ವರೂಪಾ ಟಿ.ಕೆ. ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ನೂತನ ಸಿಇಓ ಆಗಿ ಪಾಟೀಲ ಭುವನೇಶ ದೇವಿದಾಸರನ್ನು ನಿಯೋಜನೆ ಮಾಡಿದೆ.

2018ರ ಬ್ಯಾಚಿನ ಐಎಎಸ್ ಅಧಿಕಾರಿ ಹಾಗೂ ಕಲಬುರ್ಗಿ ನಗರ ಪಾಲಿಕೆ ಆಯುಕ್ತರಾಗಿದ್ದ ಪಾಟೀಲ ಭುವನೇಶ ದೇವಿದಾಸ್ ಅವರನ್ನು, ಧಾರವಾಡ ಜಿಲ್ಲಾ ಪಂಚಾಯ್ತಿಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ರಾಜ್ಯ ಸರ್ಕಾರ ನೇಮಿಸಿದೆ. 2012ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದ ಹಾಗೂ ಪ್ರಸ್ತುತ ಧಾರವಾಡ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಸ್ವರೂಪಾ ಟಿ.ಕೆ. ಅವರನ್ನು ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರಾಗಿ ರಾಜ್ಯ ಸರ್ಕಾರ ನೇಮಿಸಿದೆ.