ಇಡಿ ತನಿಖೆ ರಾಜಕೀಯ ಪ್ರೇರಿತ…ನನ್ನ ಇಮೇಜ್ ಡ್ಯಾಮೇಜ್ ಮಾಡಲು ಯತ್ನ
ಬಿಜೆಪಿ ಇದರಲ್ಲಿ ಯಶಸ್ವಿಯಾಗುವುದಿಲ್ಲ; ಸಿಎಂ ಸಿದ್ಧರಾಮಯ್ಯ
ಇಡಿ ತನಿಖೆ ರಾಜಕೀಯ ಪ್ರೇರಿತ ಎಂಬುದು ಎಲ್ಲರಿಗೂ ಗೊತ್ತಿದೆ. ನನ್ನ ಹೆಸರನ್ನು ಕೆಡಿಸಲು ತೇಜೋವಧೆ ಮಾಡಲು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ. ಅದರಲ್ಲಿ ಬಿಜೆಪಿ ಯಶಸ್ವಿಯಾಗುವುದಿಲ್ಲ. ಮುಡಾ ವಿಚಾರದಲ್ಲಿ ನಮ್ಮ ಕುಟುಂಬದವರು ಯಾವ ತಪ್ಪು ಮಾಡಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ವಿಚಾರದಲ್ಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅದರ ಅರ್ಥ ಕಾನೂನು ಪ್ರಕಾರ ಇಲ್ಲ ಎಂಬುದು ತಾನೇ? ಅಕ್ರಮ ಹಣ ವರ್ಗಾವಣೆಯಾಗಿದ್ದರೇ ನ್ಯಾಯಾಲಯ ಏಕೆ ತಡೆ ಕೊಡುತ್ತಿತ್ತು? ನನ್ನ ಹೆಸರನ್ನು ಕೆಡಿಸಲು ಇಷ್ಟೆಲ್ಲ ಪ್ರಯತ್ನಗಳು ನಡೆಯುತ್ತಿವೆ. ಇಡಿ ಬಿಡುಗಡೆ ಮಾಡಿದ್ದು ತನಿಖಾ ವರದಿಯಲ್ಲ, ಕೇವಲ ಜಪ್ತಿ ವರದಿ ಎಂದರು.
ಇಡಿ ತನಿಖೆ ರಾಜಕೀಯ ಪ್ರೇರಿತ ಎಂಬುದು ಎಲ್ಲರಿಗೂ ಗೊತ್ತಿದೆ. ನನ್ನ ವಿಚಾರದಲ್ಲಿ ಮಾತನಾಡಲು ಇವರಿಗೆ ಏನೂ ಸಿಕ್ಕಿಲ್ಲ. ಈ ವಿಚಾರ ಇಟ್ಟುಕೊಂಡು ನನ್ನ ಹೆಸರಿಗೆ ಮಸಿ ಬಳಿಯಲು ಯತ್ನಿಸ್ತಿದ್ದಾರೆ. ಅದರಲ್ಲಿ ಬಿಜೆಪಿ ಯಶಸ್ವಿಯಾಗುವುದಿಲ್ಲ. ಮುಡಾ ವಿಚಾರದಲ್ಲಿ ನಮ್ಮ ಕುಟುಂಬದವರು ಯಾವ ತಪ್ಪು ಮಾಡಿಲ್ಲ ಎಂದು ಹೇಳಿದರು.
ಇನ್ನು ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಜಿ ಪರಮೇಶ್ವರ್ ಸಭೆ ವಿಚಾರವಾಗಿ ಮಾತನಾಡಿದ ಅವರು, ಊಟ ಮಾಡಿದರೆ, ಸಭೆ ಮಾಡಿದರೆ ತಪ್ಪಲ್ಲ. ಅದರಲ್ಲಿ ಊಹೆ ಮಾಡುವುದಕ್ಕೆ ಏನಿಲ್ಲ ಎಂದು ಹೇಳಿದರು.