ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ದೊಡ್ಡ ಯೋಜನೆಯಾಗಿದ್ದು, ಇದನ್ನು ಜಾರಿಗೆ ತರುವಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಕಷ್ಟು ಶ್ರಮ ಹಾಕಿದ್ದಾರೆ. ಇದರ ರೂವಾರಿ ಅವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು.
ನಾನು ಇಟ್ಟ ನಂಬಿಕೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಮರ್ಥವಾಗಿ ನಿಭಾಯಿಸಿದ ಫಲವಾಗಿ ಇಂದು ರಾಜ್ಯದ 1.26 ಕೋಟಿ ಗೃಹಣಿಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಸಂದಾಯವಾಗುತ್ತಿದ್ದು, ಈ ಯೋಜನೆಗೆ ವಾರ್ಷಿಕ 33 ಸಾವಿರ ಕೋಟಿ ಮೀಸಲಿಡಲಾಗುತ್ತಿದೆ. ಇದರ ಸಂಪೂರ್ಣ ಕ್ರೆಡಿಟ್ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಲ್ಲಬೇಕು ಎಂದರು.