ಹು-ಧಾ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 45 ಜನ್ ರೌಡಿಶೀಟರ್‌ಗಳಿಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಗಡಿಪಾರು ಆದೇಶ ಹೊರಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಿಷನರ ಎನ್ ಶಶಿಕುಮಾರ್ ಹು-ಧಾ ಅವಳಿ ನಗರದಲ್ಲಿ 45 ಜನ ರೌಡಿಶೀಟರ್‌ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೊಲೆ, ಸುಲಿಗೆ, ಮಾದಕ ವಸ್ತು ಮಾರಾಟ ಹಾಗೂ ಸೇವನೆ, ಮಟ್ಕಾ, ಭೂ ಮಾಫಿಯಾ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಭಾಗಿಯಾಗಿ ರೌಢಿಶೀಟರ್ ಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಗಳಿದ್ದು, ಈ ನಿಟ್ಟಿನಲ್ಲಿ ಶಾಂತಿಯನ್ನು ನೆಲೆಸಲು ಕ್ರಮ ಜರಗಿಸಲಾಗಿದೆ.
ಬರೋಬರಿ 45 ರೌಡಿ ಶೀಟರ್‌ಗಳ ವಿರುದ್ಧ ಗಡಿಪಾರು ಆದೇಶ ಮಾಡಲಾಗಿದೆ. ಆರೋಪಿಗಳನ್ನು ಬೀದರ್, ಯಾದಗಿರಿ, ದಕ್ಷಿಣ ಕನ್ನಡ, ಚಾಮರಾಜನಗರಗಳಿಗೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಇವರ ಚಟುವಟಿಕೆಗಳ ಮೇಲೆ ನಿಕಟ ನಿಗಾ ಇರಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಮಹನಿಂಗ ನಂದಗಾವಿ, ಆರ್.ರವೀಶ್, ಎಸಿಪಿ, ವಿವಿಧ ಠಾಣೆಗಳ ಇನ್ಸ್ಪೆಕ್ಟರ್ ಗಳು ಇದ್ದರು.