Banglore

ಡಿನ್ನರ್ ಪಾರ್ಟಿ ಬಗ್ಗೆ ನನಗೆ ಗೊತ್ತಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್

Share

ಕುಟುಂಬದೊಂದಿಗೆ ವಿದೇಶ ಪ್ರವಾಸದಲ್ಲಿದ್ದಾಗ ಬೆಂಗಳೂರಿನಲ್ಲಿದ್ದವರು ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ” ಎಂದರು.ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂದು ಕೇಳಿದಾಗ, “ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?” ಎಂದರು. ಪ್ಯಾರಿ ದೀದೀ ಯೋಜನೆಯ ಘೋಷನೆ ಕುರಿತು ದೆಹಲಿಗೆ ಬಂದಿದ್ಧೇನೆ. ಡಿನ್ನರ್ ಪಾರ್ಟಿ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ಕಾರ್ಯದ ಕುರಿತು ದೆಹಲಿಗೆ ಬಂದಿದ್ದು, ಡಿನ್ನರ್ ಪಾಲಿಟಿಕ್ಸ್ ಕುರಿತು ಯಾವುದೇ ಮಾಹಿತಿಯಿಲ್ಲ ಎಂದಿದ್ದಾರೆ.

ಇನ್ನು ರಾಜ್ಯದ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಜಾರಿಗೊಳಿಸುವ ನಿಟ್ಟಿನಿಂದ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಲು ಬಂದಿದ್ದೇವೆ. ಸೋಮಣ್ಣ ಅವರ ಮೂಲಕ ಕಡತಗಳನ್ನು ಒದಗಿಸಬೇಕಾಗಿದೆ. ಮೂರು ವಾರದಲ್ಲಿ ತಿರ್ಮಾಣಕ್ಕೆ ಬರಬೇಕಾಗಿತ್ತು. ತಮಿಳು ನಾಡು ಸರ್ಕಾರದೊಂದಿಗೂ ಕೂಡ ಚರ್ಚಿಬೇಕಾಗುತ್ತದೆ ಎಂದರು. ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಪಡೆಯುವ ಕುರಿತು ಚರ್ಚೆಯಾಗಿದೆ ಎಂದರು.

Tags:

error: Content is protected !!