ಮಹಾತ್ಮಗಾಂಧಿ ವಿಚಾರಧಾರೆಗಳನ್ನು ದೇಶದ ಮೂಲೆಮೂಲೆಗೆ ತಿಳಿಸುವ ಉದ್ದೇಶದಿಂದ ಜೈಬಾಪು, ಜೈ ಭೀಮ್, ಜೈ ಸಂವಿಧಾನವನ್ನು ಬೆಳಗಾವಿಯಲ್ಲಿ ಆಯೋಜಿಸಲಾಗಿದೆ. ಇದು ಇತಿಹಾಸದ ಪುಟವನ್ನು ಸೇರ್ಪಡೆಯಾಗಲಿದೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದರು.
ನಗರದ ಖಾಸಗಿ ಹೊಟೆಲ್ ನಲ್ಲಿ ಸಮಾವೇಶದ ಹಿನ್ನೆಲೆಯಲ್ಲಿ ಕಾರವಾರ, ಗದಗ, ಹುಬ್ಬಳ್ಳಿ-ಧಾರವಾಡ ಜನಪ್ರತಿನಿಧಿಗಳ ಪೂರ್ವಭಾವಿ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಬಾಪು, ಜೈಭೀಮ, ಜೈ ಸಂವಿಧಾನ ಎಐಸಿಸಿ ಕಾರ್ಯಕ್ರಮವಾಗಿದೆ. ಇದರ ಜವಾಬ್ದಾರಿಯನ್ನು ರಾಜ್ಯದಲ್ಲಿ ಕೆಪಿಸಿಸಿ ವಹಿಸಿಕೊಂಡಿದೆ. ಹೀಗಾಗಿ ಜ.21 ರಂದು ನಡೆಯುವ ಸಮಾವೇಶದ ಪೂರ್ವಭಾವಿ ಸಭೆಯನ್ನು ಇಂದು ಮಾಡಿದ್ದೇವೆ. ಧಾರವಾಡ ಜಿಲ್ಲೆಯಿಂದಲೇ 75 ಸಾವಿರಕ್ಕೂ ಅಧಿಕ ಜನರು ಭಾಗವಹಿಸಲು ನಿರೀಕ್ಷೆಯಿದೆ. ಅಲ್ಲದೇ ರಾಜ್ಯಾದ್ಯಂತ ಜನರು ಭಾಗವಹಿಸಲು ಸಾಂಕೇತಿಕವಾಗಿ ಭಾಗವಹಿಸಲು ಕರೆ ಕೊಟ್ಟಿದ್ದೇವೆ ಎಂದರು.
ಈ ಸಮಾವೇಶ ಐತಿಹಾಸಿಕ ಕಾರ್ಯಕ್ರಮವಾಗಿದೆ. ಅಂದು ನಡೆಸುವ ಸಮಾವೇಶದಲ್ಲಿ ತೆಗೆದುಕೊಳ್ಳುವ ನಿರ್ಣಯವನ್ನು ದೇಶದ ಮೂಲೆಮೂಲೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಅಂದು ಬೆಳಿಗ್ಗೆ 10.30 ಕ್ಕೆ ಸರ್ಕಾರದ ಕಾರ್ಯಕ್ರಮ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೇ, ಸಂಸದ ರಾಹುಲ್ ಗಾಂಧಿ ಗಾಂಧಿ ಪುತ್ಥಳಿಯನ್ನು ಅನಾವರಣ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪಕ್ಷ ಭೇದ ಮರೆತು ಎಲ್ಲರಿಗೂ ಆಮಂತ್ರಣ ನೀಡಲಾಗಿದೆ ಎಂದರು.
ಇದೇ ವೇಳೆ ರಾಜ್ಯದ 100 ಕಾಂಗ್ರೆಸ್ ಕಚೇರಿಗಳಿಗೆ ಭೂಮಿಪೂಜೆ ನೆರವೇರಿಸಲು ಸಿದ್ದತೆ ನಡೆಸಿದ್ದೇವೆ ಎಂದರು.
ಇದೇ ವೇಳೆ ನಕಲಿ ಗಾಂಧಿಗಳು ಸಮಾವೇಶವನ್ನು ನಡೆಸುತ್ತಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾವೆಲ್ಲರೂ ಅಸಲಿ ಗಾಂಧಿಗಳು, ಗೂಡ್ಸೆ ಸಂತತಿಯವರು ನಕಲಿ ಗಾಂಧಿಗಳೆಂದು ಟೀಕೆ ಮಾಡುವುದು ಸಹಜ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿಗೋಷ್ಠಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ, ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್.ಹೆಚ್.ಕೊನರೆಡ್ಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.