ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರನ್ನು ಭೇಟಿ ಮಾಡಿ ಮುಗಳಖೋಡ ಜಿಡಗಾ ಮಠದ ಶ್ರೀ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳು ಆರೋಗ್ಯವನ್ನು ವಿಚಾರಿಸಿದರು.

ಸುಕ್ಷೇತ್ರ ಮುಗಳಖೋಡ ಜಿಡಗಾ ಮಠದ ಶ್ರೀ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳು ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು. ಬೇಗನೆ ಗುಣಮುಖರಾಗಿ ಜನಸೇವೆಗೆ ಅಣಿಯಾಗುವಂತೆ ಹರಸಿದರು.