Vijaypura

ಹಲ್ಲೆಗೊಳಗಾದ ಕಾರ್ಮಿಕರಿಗೆ ಸಾಂತ್ವನ ಹಾಗೂ ಧೈರ್ಯ ಹೇಳಿದ ಸಚಿವ ಎಂ.ಬಿ.ಪಾಟೀಲ

Share

ವಿಜಯಪುರ ನಗರದ ಹೊರ ವಲಯದ ಬಸವ ನಗರದ ಖೇಮು ರಾಠೋಡ ಮಾಲಿಕತ್ವದ ಇಟ್ಟಂಗಿ ಬಟ್ಟಿಯಲ್ಲಿ ಕಾರ್ಮಿಕರ ಮೇಲೆ ನಡೆದ ಹಲ್ಲೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸಾಂತ್ವನ ಹಾಗೂ ಧೈರ್ಯ ಹೇಳಿದರು.

ಸಂಕ್ರಮಣ ಹಬ್ಬಕ್ಕೆ ತಮ್ಮ ಊರುಗಳಿಗೆ ತೆರಳಿ ಕೆಲಸಕ್ಕೆ ಮರಳಿದ್ದ ಕಾರ್ಮಿಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಇಟ್ಟಂಗಿ ಭಟ್ಟಿ ಮಾಲಿಕ ಖೇಮು ರಾಠೋಡ ಮತ್ತು ಇತರರು ಕಾರ್ಮಿಕರ ಮೇಲೆ ತೀವ್ರವಾಗಿ ಹಲ್ಲೆ ಮಾಡಿ ಅದನ್ನು ಮೊಬೈಲಿನಲ್ಲಿ ವಿಡಿಯೋ ಕೂಡ ಮಾಡಿಕೊಂಡು ಚಿತ್ರಹಿಂಸೆ ನೀಡಿದ್ದರು. ಈ ಘಟನೆಯಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೊಳಗಾದ ಕಾರ್ಮಿಕರನ್ನು ವಿಚಾರಿಸಿ ಸಾಂತ್ವನ ಹಾಗೂ ಧೈರ್ಯ ಹೇಳಿದರು. ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಕಟಕದೊಂಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:

error: Content is protected !!