Belagavi

ಸಚಿವೆ ಹೆಬ್ಬಾಳ್ಕರ್ ಆಸ್ಪತ್ರೆಗೆ ಸಭಾಪತಿ/ ಸಚಿವರುಗಳು ಭೇಟಿ

Share

 

ಕಾರು ಅಪಘಾತದಲ್ಲಿ ಗಾಯಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ವಿಚಾರಿಸಿದರು. ಇನ್ನು ಆಸ್ಪತ್ರೆಗೆ ಹಲವಾರು ಸಚಿವರುಗಳು ಭೇಟಿ ನೀಡಿದರು.

ಕಾರು ಅಪಘಾತದಲ್ಲಿ ಗಾಯಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ಸಂಸದೆ ಪ್ರಿಯಾಂಕಾ ಗಾಂಧಿಯವರು ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಇಂದು ಬೆಳಗಾವಿಗೆ ಆಗಮಿಸಿದ್ದ ಸಂಸದೆ ಪ್ರಿಯಾಂಕಾ ಗಾಂಧಿಯವರನ್ನು ಸ್ವಾಗತಿಸಲು ಮೃಣಾಲ್ ಹೆಬ್ಬಾಳ್ಕರ್ ಅವರು ತೆರಳಿದಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ವಿಚಾರಿಸಿದರು.

ಇನ್ನು ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ , ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿ, ಹುಬ್ಬಳ್ಳಿಯ ಸಿದ್ದಾರೂಢ ಮಠದ ಪ್ರಸಾದವನ್ನು ನೀಡಿ, ಶೀಘ್ರ ಗುಣಮುಖರಾಗುವಂತೆ ‌ಹಾರೈಸಿದರು.

ಅದೇ ರೀಇ ಚಿಕ್ಕಮಗಳೂರಿನ ಗೌರಿಗದ್ದೆಯ ಅವಧೂತರಾದ ಶ್ರೀ ವಿನಯ ಗುರೂಜಿ, ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡರ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಖಾನಾಪುರ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಮೂಡಿಗೇರಿ ಶಾಸಕಿ ನಯನಾ ಮೋಟಮ್ಮ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಉಡುಪಿ ಕಾಂಗ್ರೆಸ್ ಮುಖಂಡರಾದ ಗಪೂರ್ ಸೇರಿದಂತೆ ಹಲವರು ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿದರು.

Tags:

error: Content is protected !!