ಹುಕ್ಕೇರಿ ತಾಲೂಕಿನ ಯಮಕನಮರ್ಡಿಯಲ್ಲಿ ಗೂಡ್ಸ್ ವಾಹನ ಪಲ್ಟಿಯಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಸಚಿವರಾದ ಸತೀಶ ಜಾರಕಿಹೊಳಿ ಅವರು ವಿಚಾರಿಸಿದರು. ಗಾಯಾಳುಗಳ ಚಿಕಿತ್ಸಾವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದರು.

ಹುಕ್ಕೇರಿ ತಾಲೂಕಿನ ಯಮಕನಮರ್ಡಿಯಲ್ಲಿ ಗೂಡ್ಸ್ ವಾಹನ ಪಲ್ಟಿಯಾಗಿ 25 ಕ್ಕೂ ಹೆಚ್ಚು ನರೇಗಾ ಕಾರ್ಮಿಕರು ಗಾಯಗೊಂಡಿದ್ದು, ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸಚಿವರಾದ ಸತೀಶ ಜಾರಕಿಹೊಳಿ ಅವರು ಬಿಮ್ಸಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸರ್ಕಾರದಿಂದ ಚಿಕಿತ್ಸೆಯ ವೆಚ್ಚವನ್ನು ಭರಸಲಾಗುವುದು ಎಂದರು. ಇನ್ನು ಕೆಲಸವಿದ್ದಲ್ಲಿ ಬೇರೆಡೆ ತೆರಳುತ್ತಿದ್ದಾರೆ. ಇನ್ನು ಕೆ.ಡಿ.ಪಿ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ಹುದ್ಧೆಗಳನ್ನು ಭರ್ತಿ ಮಾಡಲೂ ಕ್ರಮಕೈಗೊಳ್ಳಲಾಗುವುದು ಎಂದರು. ಇನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆರಂಭಿಸಲೂ ಇಲ್ಲಿರುವ ಸಿಬ್ಬಂದಿಯನ್ನು ಅಲ್ಲಿ ನೇಮಿಸಲು ಸೂಚಿಸಲಾಗಿದೆ. ತಕ್ಷಣ ಇಲ್ಲಿನ ವಿಭಾಗವನ್ನು ಸ್ಥಳಾಂತರಿಸಲಾಗುವುದು ಎಂದರು.
ಇನ್ನು ಹಿಡಕಲ್ ಡ್ಯಾಂ ನೀರನ್ನು ಬೆಳಗಾವಿಯ ಧಾರವಾಡದ ಕೈಗಾರಿಕಾ ವಲಯಕ್ಕೆ ಪೂರೈಸುವ ಕುರಿತು ಸರ್ವಪಕ್ಷಗಳ ಸಭೆ ಕರೆಯುವ ಅವಶ್ಯಕತೆಯಿಲ್ಲ. ಸಂಬಂಧಿಸಿದ ಇಲಾಖೆಗಳ ಸಭೆ ಕರೆದು ಚರ್ಚಿಸಲಾಗುವುದು ಎಂದರು.