ಕರೋಶಿ ಗ್ರಾಮದ ರಸ್ತೆ ಕಾಮಗಾರಿಗೆ ಸಿಆರ್ ಎಫ್ ಅನುದಾನದಿಂದ 2 ಕೋಟಿ ರೂ.ಗಳ ಮಂಜೂರಾಗಿದ್ದು, ಗುತ್ತಿಗೆದಾರರು ಈ ಕಾಮಗಾರಿಯನ್ನು ಉತ್ತಮ ಗುಣಮಟ್ಟದಿಂದ ಮಾಡಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಮುಖ್ಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನತೆಗೆ ರಸ್ತೆ, ನೀರಾವರಿ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಶ್ರಮಿಸಲಾಗುವುದು ಸಂಸದೆ ಪ್ರೀಯಾಂಕಾ ಜಾರಕಿಹೊಳಿ ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಮಾತನಾಡಿ, ಕರೋಶಿ ಗ್ರಾಮದ ಸರ್ಕಾರಿ ಶಾಲೆಗೆ ಈಗಾಗಲೇ ನಾಲ್ಕು ಕೊಠಡಿಗೆ ಅನುದಾನ ನೀಡಲಾಗಿದೆ. ಇನ್ನು ನಾಲ್ಕು ಕೊಠಡಿ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದು, ಸಚಿವ ಸತೀಶ ಜಾರಕಿಹೊಳಿ ಹಾಗೂ ಸಂಸದೆ ಪ್ರಿಯಾಂಕ ಜಾರಕಿಹೊಳಿ ಅವರಿಗೆ ಇನ್ನೂ ನಾಲ್ಕು ಕೊಠಡಿ ನೀಡಬೇಕು ಎಂದು ಮನವಿಯನ್ನು ಮಾಡಿಕೊಂಡರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ಮಹಾಂತೇಶ ಭಾತೆ, ಸಂಜೀವ ಕಾಂಬಳೆ, ಶಿವಪ್ಪ ಪೊಗತ್ಯಾನಟ್ಟಿ, ರಾಜು ಕೊಟಗಿ, ಬಸವಪ್ರಭು ಭಾತೆ, ಫಾರೂಕ್ ಪಟೇಲ್,ಚೇತನ ಹೊಳೆಪ್ಪಗೊಳ,ಗುತ್ತಿಗೆದಾರ ವಿಜಯ ಮಾಂಜ್ರೇಕರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.