KHANAPUR

ಖಾನಾಪೂರದ ಪತ್ರಕರ್ತ ಪ್ರಸನ್ನ ಕುಲಕರ್ಣಿ ಅವರಿಗೆ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ ಪ್ರದಾನ

Share

ಖಾನಾಪೂರದ ಪತ್ರಕರ್ತ ಪ್ರಸನ್ನ ಕುಲಕರ್ಣಿ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪಟೇಲ್ ಭೈರ ಹನುಮಯ್ಯ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಖಾನಾಪೂರದ ಪತ್ರಕರ್ತರಾದ ಪ್ರಸನ್ನ ಕುಲಕರ್ಣಿ ಅವರಿಗೆ ತುಮಕೂರುನಲ್ಲಿ ನಡೆದ 39 ನೇ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನದಲ್ಲಿ ಅವರು ಬರೆದ ಮತ್ತು ಇತ್ತೀಚಿಗೆ ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ಪ್ರಕಟವಾದ ಖಾನಾಪೂರ ತಾಲೂಕಿನ ಭೀಮಗಡ ವನ್ಯಧಾಮ ವ್ಯಾಪ್ತಿಯ ಕೃಷ್ಣಾಪುರ ಗ್ರಾಮದ ನಾಗರೀಕರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ವರದಿಗೆ ಸಂಘದ ವತಿಯಿಂದ ಪಟೇಲ್ ಭೈರ ಹನುಮಯ್ಯ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ ಸೇರಿದಂತೆ ಇನ್ನಿತರ ಗಣ್ಯಮಾನ್ಯರು ಉಪಸ್ಥಿತರಿದ್ದರು.

Tags:

error: Content is protected !!