Uncategorized

ಸ್ತ್ತೀ ಶಕ್ತಿ ಯೋಜನೆ ನಿಲ್ಲಿಸಿ, ಇಲ್ಲವೇ ಸಮರ್ಪಕ ಅನುಷ್ಠಾನಗೊಳಿಸಲು ಲಿಂಗತ್ವ ಅಲ್ಪಸಂಖ್ಯಾತರ ಪ್ರತಿಭಟನೆ

Share

ರಾಜ್ಯದಲ್ಲಿ ಸರ್ಕಾರ ಮಹಿಳೆಯರಿಗಾಗಿ ಸ್ತ್ರೀ ಶಕ್ತಿ ಯೋಜನೆ ಜಾರಿಗೊಳಿಸಿದೆ. ಸ್ತ್ರೀ ಶಕ್ತಿ ಯೋಜನೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೂ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಆದ್ರೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಕಂಡಕ್ಟರ್ ಗಳಿಂದ ಸಾರ್ವಜನಿಕವಾಗಿ ನಿಂದನೆ, ಹಿಂಸೆ ಆರೋಪ ಕೇಳಿ ಬಂದಿದೆ‌. ಶಕ್ತಿ ಯೋಜನೆ ನಿಲ್ಲಿಸಿ, ಇಲ್ಲವೇ ಸಮರ್ಪಕ ಅನುಷ್ಠಾನಗೊಳಿಸಿ ಎಂದು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯ ಒತ್ತಾಯಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್….

ಶಕ್ತಿ ಯೋಜನೆಯಡಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಬಸ್ ಪ್ರಯಾಣ ವೇಳೆ ಜಿಲ್ಲಾಧಿಕಾರಿಗಳು ನೀಡಿರುವ ಗುರುತಿನ ಚೀಟಿ ತೋರಿಸಿದರೂ ಬಸ್ ಕಂಡಕ್ಟರ್ ಗಳಿಂದ ಸಾರ್ವಜನಿಕ ನಿಂದನೆ, ಹಿಂಸೆ ನಿರಂತರವಾಗಿ ನಡೆಯುತ್ತಿವೆ. ಹಾಗಾಗಿ ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಆಧಾರಿತ ನವಸ್ಪೂರ್ತಿ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ‌ ಮೂಲಕ ಮುಖ್ಯಮಂತ್ರಿಗಳಿಗೆ, ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರು. ನಗರದ ಡಿಸಿ ಕಚೇರಿ ಹಾಗೂ ಕೇಂದ್ರ ಬಸ್ ನಿಲ್ದಾಣ ಬಳಿ ಸಮುದಾಯದಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಈ ವೇಳೆ ಮಹಿಳೆಯರಿಗೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರದ ಉಚಿತ ಯೋಜನೆಯಾದ ಶಕ್ತಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ತರುವಲ್ಲಿ ಸಾರಿಗೆ ಇಲಾಖೆ ಜಿಲ್ಲಾ ನಿಯಂತ್ರಣಾಧಿಕಾರಿಗಳು ವಿಫಲರಾಗಿದ್ದಾರೆ.

ಹಾಗಾಗಿ ಈ ಯೋಜನೆಯನ್ನು ನಮ್ಮ ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪಸಂಖ್ಯಾತರಿಗೆ ನಿಲ್ಲಿಸಲು ಒತ್ತಾಯಿಸುತ್ತೇವೆ. ದಿನನಿತ್ಯ ಬಸ್ ಗಳಲ್ಲಿ ಪ್ಯಾಂಟ ಶರ್ಟ್, ಸೀರೆ ಮೇಲೆ ಇರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಗಳಿಗೆ ಜಿಲ್ಲಾಧಿಕಾರಿಗಳು ನೀಡಿರುವ ಟ್ರಾನ್ಸಜೆಂಡರ್ ಐಡಿ ಕಾರ್ಡ್ ತೋರಿಸಿದರೂ ಕಂಡಕ್ಟರ್ ಗಳು ತುಂಬಾ ತುಚ್ಚುವಾಗಿ ನಿಂದಿಸುತಿರುವುದಲ್ಲದೇ, ಈ ಕಾರ್ಡ್ ಗಳನ್ನು ನಿಮಗೆ ಯಾರು ನೀಡುತ್ತಿದ್ದಾರೆ ಎಂದು ಸಾರ್ವಜನಿಕವಾಗಿ ಪ್ರಶ್ನಿಸುತ್ತಿದ್ದಾರೆ. ಈ ಮೂಲಕ ನಮ್ಮ ಲಿಂಗತ್ವವನ್ನು ಬಹಿರಂಗಗೊಳಿಸಿ ನಾವು ಕುಟುಂಬ, ಸಮಾಜದಲ್ಲಿ ಜೀವಿಸಲಾಗದೇ ಮನೆಬಿಟ್ಟು ಬಂದು ಮತ್ತೆ ಭಿಕ್ಷಾಟನೆ ಮತ್ತು ಲೈಂಗಿಕ ವೃತ್ತಿಯಲ್ಲಿ ತೊಡಗುವಂತೆ ಮಾಡುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತರು ಸಾಮಾಜಿಕ, ಕೌಟುಂಬಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬದಲಾಗಿ ಲಿಂಗತ್ವ ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿಣಿಯಲ್ಲಿ ನಮ್ಮ ಸಂವಿಧಾನಿಕ ಹಕ್ಕುಗಳೊಂದಿಗೆ ಘನತೆ ಜೀವನ ನಡೆಸಲು ಶ್ರಮಿಸುತ್ತಿದ್ದೇವೆ. ಶಕ್ತಿ ಯೋಜನೆಯಲ್ಲಿ ಎದುರಿಸುತ್ತಿರುವ ಸಮಸ್ಯೆ ಕುರಿತು ನವಸ್ಪೋರ್ತಿ ಸಂಘಟನೆಯಿಂದ ಮೌಕಿಕವಾಗಿ ಹಾಗೂ ನೂರಾರು ಪತ್ರಗಳನ್ನು ಬರೆದರೂ ಯಾವುದೇ ಕ್ರಮವಾಗಿಲ್ಲ ಎಂದು ಆರೋಪಿಸಿದರು.

ಇನ್ನೂ ಸಮಸ್ಯೆ ಹೇಳಿಕೊಳ್ಳಲು ಹೋದರೆ ಸಾರಿಗೆ ಇಲಾಖೆ ಡಿಸಿ ತುಚ್ಛವಾಗಿ ಮಾತನಾಡಿ, ಈ ಕಾರ್ಡ್ ಕೊಟ್ಟವರು ಯಾರು ಎಂದು ಅವಮಾನಿಸುತ್ತಿದ್ದಾರೆ. ಶಕ್ತಿ ಯೋಜನೆಯಲ್ಲಿ ಪ್ರಯಾಣಿಸುವಾಗ ಯಾವುದೆ ಹಿಂಸೆ, ಸಾರ್ವಜನಿಕ ನಿಂದನೆ ಆಗದ ರೀತಿಯಲ್ಲಿ ಈ ಒಂದು ಯೋಜನೆ ಅನುಷ್ಠಾನಗೊಳಿಸಬೇಕು. ಸಿಎಂ, ಸಚಿವರು ಹಾಗೂ ಡಿಸಿ ಅವರು ನಿಂದಿಸುವವರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳಬೇಕು. ಲಿಂಗತ್ವ ಅಲ್ಪಸಂಖ್ಯಾತರ ವಿವಿಧ ಗುರುತಿಸುವಿಕೆಗಳ ಬಗ್ಗೆ ಜಾಗೃತಿಗೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿಕೊಡಬೇಕು. ಅಲ್ಲದೇ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಘನತೆ, ಗೌರವಯುತ ಸಮಾನತೆ ಬದುಕನ್ನು ನಡೆಸಲು ವಾತಾವರಣ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸುಮಾರು 250 ಜನ ಲಿಂಗತ್ವ ಅಲ್ಪಸಂಖ್ಯಾತರು ಬಾಗವಹಿಸಿದ್ದರು. ಸರ್ಕಾರ ಇವರ ಮನವಿಗೆ ಅದೇಗೆ ಸ್ಪಂದಿಸುತ್ತದೆ ಅನ್ನೋದನ್ನು ಕಾದು ನೋಡಬೇಕಿದೆ.

ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ…

Tags:

error: Content is protected !!