Karnataka CM

7ನೇ ವೇತನ ಆಯೋಗದಿಂದ ಆಗಿರುವ ನಷ್ಟ ಸರಿಪಡಿಸಲು ನಿವೃತ್ತ ನೌಕರರಿಂದ ಸಿಎಂ ಗೆ ಮನವಿ

Share

ಏಳನೇ ವೇತನ ಆಯೋಗದಿಂದ ನಿವೃತ್ತ ನೌಕರಿಗಾಗಿರುವ ಆರ್ಥಿಕ ನಷ್ಟವನ್ನು ಆದಷ್ಟು ಬೇಗ ಸರಿಪಡಿಸಬೇಕೆಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮಾನ್ವಿ ಅರ್ಪಿಸಲಾಯಿತು

ಸರ್ಕಾರವು ಸರ್ಕಾರಿ ನೌಕರರಿಗೆ ವೇತನ ಭತ್ಯೆಗಳನ್ನು ಪರಿಷ್ಕರಿಸಲು ಹಾಗೂ ಪಿಂಚಣಿ ದಾರರ ಪಿಂಚಣಿಯನ್ನು ಪರಿಷ್ಕರಿಸಲು ಡಾಕ್ಟರ್ ಸುಧಾಕರ್ ರಾವ್ ಅವರ ನೇತೃತ್ವದಲ್ಲಿ 7ನೇ ವೇತನ ಆಯೋಗವನ್ನು ರಚಿಸಿತ್ತು. ಈ ವೇತನ ಆಯೋಗವು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ ಸರ್ಕಾರವು ಈ ಸಂಬಂಧ 2024 ರಲ್ಲಿವೇತನ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ಏಳನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದ ಮೇಲೆ ನಿವೃತ್ತಿ ಆರ್ಥಿಕ ಸೌಲಭ್ಯಗಳಾದ ಡಿ ಸಿ ಆರ್ ಜಿ ಕಮ್ಯುಟೇಷನ್ ಹಾಗೂ ಗಳಿಕೆ ರಜೆ ನಗತಿಕರಣಗಳ ಸೌಲಭ್ಯಗಳ ಲೆಕ್ಕಾಚಾರದ ವ್ಯತ್ಯಾಸದ ಮೊತ್ತವನ್ನು ಮಾತ್ರ ಕೊಡಬೇಕೆಂದು 2024 ರಿಂದ ಹೋರಾಟ ಮಾಡುತ್ತಿದ್ದರು ಇದುವರೆಗೂ ಬೇಡಿಕೆ ಈಡೇರಿಸಿಲ್ಲ ಹತ್ತು ದಿನಗಳ ಒಳಗಾಗಿ ಬೇಡಿಕೆ ಈಡೇರಿಸದಿದ್ದರೆ ಬೆಂಗಳೂರು ಚಲೋ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತೇವೆ ಎಂದು ವೇದಿಕೆಯ ಪದಾಧಿಕಾರಿ ಮಾಧ್ಯಮಗಳೊಂದಿಗೆ ಮಾತನಾಡಿ ಹೇಳಿದ್ದಾರೆ

ಈ ಸಂದರ್ಭದಲ್ಲಿ ನೌಕರರ ವೇದಿಕೆ ಪದಾಧಿಕಾರಿಗಳು ಹಾಗೂ ನಿವೃತ್ತ ನೌಕರರು ಭಾಗವಹಿಸಿದ್ದರು ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಲಾಯಿತು

Tags:

error: Content is protected !!