ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ ಚಳವಳಿಯ ಹಿರಿಯ ನಾಯಕ ಲಕ್ಷ್ಮೀನಾರಾಯಣ ನಾಗವಾರ ಅವರ ಅಂತಿಮ ದರ್ಶನ ಪಡೆದರು. ಕುಟುಂಬದವರ ಮತ್ತು ಬಂಧುಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಅವರ ದುಃಖದಲ್ಲಿ ಭಾಗಿಯಾದರು.
ಲಕ್ಷ್ಮೀನಾರಾಯಣ್ ಅವರ ಅಂತ್ಯ ಸಂಸ್ಕಾರದ ವೇಳೆ ಪೊಲೀಸ್ ಗೌರವ ಸಲ್ಲಿಸಲು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.