Belagavi

ಈಜಲು ಹೋದ ಬಾಲಕ ಜಲಸಮಾಧಿ

Share

ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮ ಗಣೇಶ ಹೀರಾಮಣಿ ಸುತಾರ್ (15) ನಿನ್ನೆ ಮಂಗಳವಾರ ಶಾಲೆಗೆ ರಜೆಯಿದ್ದ ಕಾರಣ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ನಿನ್ನೆ ದಿನವಿಡಿ ಮನೆಗೆ ಬಾರದ ಹಿನ್ನೆಲೆ ಕುಟುಂಬದವರು ಎಲ್ಲ ಕಡೆ ಹುಡುಕಿದರು. ಆದರೇ ಕೆರೆಯ ಬಳಿ ಆತನ ಬಟ್ಟೆ ಕಂಡು ಬಂದಾಗ ಮುಳುಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಕೂಡಲೇ ವಡಗಾಂವ ಗ್ರಾಮೀಣ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿ ಬಾಲಕನ ಶವವನ್ನು ಕೆರೆಯಿಂದ ಮೇಲಕ್ಕೆತಿದ್ದಾರೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ವಡಗಾಂವ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!