ದ್ವಿಚಕ್ರ ವಾಹನ ಅಪಘಾತಕ್ಕಿಡಾಗ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಮೇಲೆ ನಡೆದಿದೆ.
ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್ ಯಾದೋ ಪಾಟೀಲ್ (20) ಮತ್ತು ಸಿದ್ಧಾರ್ಥ ಬಾಳು ಪಾಟೀಲ್ (23) ಎಂದು ಮೃತರನ್ನು ಗುರುತಿಸಲಾಗಿದೆ.
ಇವರಿಬ್ಬರು ದ್ವಿಚಕ್ರ ವಾಹನದ ಮೂಲಕ ಕಾಕತಿಯ ಶ್ರೀ ಸಿದ್ಧೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ ಹಿಂದಿನಿಂದ ಬಂದ ವಾಹನಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರವಾಹನ ರಸ್ತೆಗೆ ಅಪ್ಪಳಿಸಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಕಾಕತಿ ಪೊಲೀಸ್ ಇನ್ಸಪೆಕ್ಟರ್ ಸುರೇಶ್ ಶಿಂಗೆ, ಸಬ್ ಇನ್ಸಪೇಕ್ಟರ್ ಮೃತ್ಯುಂಜಯ ಮಠದ ಮತ್ತು ಅಧಿಕಾರಿಗಳು ದೌಡಾಯಿಸಿ ಪಂಚನಾಮೆ ನಡೆಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.