Belagavi

ಮೈಸೂರಿನ ಸುತ್ತೂರು ಮಠದ ಶ್ರೀ ಗಳು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸುರ್ಜೆವಾಲಾ ಆಸ್ಪತ್ರೆಗೆ ಭೇಟಿ.

Share

ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಆಸ್ಪತ್ರೆಗೆ ಭೇಟಿ ನೀಡಿ, ಸಚಿವೆ ಹೆಬ್ಬಾಳ್ಕರ ಆರೋಗ್ಯ ವಿಚಾರಿಸಿದರು.

ಶುಕ್ರವಾರ ಸಂಜೆ ಮೈಸೂರಿನ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ನಗರದ ವಿಜಯ ಆಸ್ಪತ್ರೆಗೆ ಭೇಟಿ ನೀಡಿ ರಸ್ತೆ ಅಪಘಾತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ಕುರಿತು ಮಾಹಿತಿ ಪಡೆದು ಶೀಘ್ರ ಗುಣಮುಖರಾಗುವಂತೆ ಆಶೀರ್ವಾದ ನೀಡಿದರು.

ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಆಸ್ಪತ್ರೆಗೆ ತೆರಳಿ ಲಕ್ಷ್ಮೀ ಹೆಬ್ಬಾಳಕರ್ ಅವರ ಅರೋಗ್ಯ ವಿಚಾರಿಸಿದರು.

Tags:

error: Content is protected !!