ಬೆಳಗಾವಿಯಲ್ಲಿ ಜ. 21 ರಂದು ನಡೆಯಲಿರುವ ಜೈ ಬಾಪೂ, ಜೈ ಭೀಮ, ಜೈ ಸಂವಿಧಾನ ಕಾರ್ಯಕ್ರಮದ ಪೂರ್ವ ಸಿದ್ಧತೆ ಮತ್ತು ವೇದಿಕೆಯ ಪ್ರಾಯೋಗಿಕ ಪರಿಶೀಲನೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಸಿ.ಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರಿಂದ ನಡೆಸಲಾಯಿತು.ಜ. 21 ರಂದು ನಡೆಯಲಿರುವ ಜೈ ಬಾಪೂ, ಜೈ ಭೀಮ, ಜೈ ಸಂವಿಧಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆ ಮತ್ತು ವೇದಿಕೆಯ ಪ್ರಾಯೋಗಿಕ ಪರಿಶೀಲನೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಸಿ.ಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಸಲಾಯಿತು,ಈ ವೇಳೆ ಸಚಿವರಾದ ಸತೀಶ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ಸಚಿವರು, ಶಾಸಕರು, ಮಾಜಿ ಸಚಿವರು, ಕೈ ನಾಯಕರು ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.

ನಂತರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಸಿ.ಎಂ ಡಿ.ಕೆ.ಶಿವಕುಮಾರ್ ಗಾಂಧಿ ಭಾರತ ಕಾರ್ಯಕ್ರಮದ ಮೂಲಕ ಬೆಳಗಾವಿಗೆ ವಿಶೇಷ ಕೊಡುಗೆಯನ್ನು ನೀಡಲಾಗುವುದು. ಬೆಳಗಾವಿ ಎಲ್ಲಿದೆ ಎಂದು ದೇಶದ ಜನ ಈಗ ಹುಡುಕಿಕೊಂಡು ಬರುತ್ತಿದ್ದಾರೆ. ಗಾಂಧಿಜೀಯವರು ಅಧ್ಯಕ್ಷಸ್ಥಾನ ವಹಿಸಿಕೊಂಡು ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ಭೂಮಿ ಇದು ಎಂದರು.
ಬೆಳಗಾವಿಯಲ್ಲಿ ಕಾಂಗ್ರೆಸ್ ಮತ್ತು ದೇಶದ ಇತಿಹಾಸದ ಒಂದು ಐತಿಹಾಸಿಕ ಸಮಾವೇಶಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಈ ದೇಶದ ಸ್ವಾತಂತ್ರ್ಯ, ಸಂವಿಧಾನ ಮತ್ತು ಐಕ್ಯತೆಯನ್ನು ಕಾಪಾಡಲೂ, ಗಾಂಧಿತತ್ವ , ಬಾಬಾಸಾಹೇಬ್ ಅಂಬೇಡ್ಕರ ಅವರ ನೀತಿ ಮತ್ತು ನಮ್ಮ ಸಂವಿಧಾನದ ರಕ್ಷಣೆ ಕಾಪಾಡಲೂ ಮುಂದಿನ ಪೀಳಿಗೆಗೆ ತಿಳಿಸುವ ಉದ್ಧೇಶವನ್ನು ಹೊಂದಿದ್ದೇವೆ. ಇದು ಕೇವಲ ಕಾಂಗ್ರೆಸ ಪಕ್ಷದ ಕಾರ್ಯಕ್ರಮವಲ್ಲ. ದೇಶದ ಸಂವಿಧಾನವನ್ನು ಉಳಿಸುವ, ಗಾಂಧಿಜೀಯವರ ಆದರ್ಶ, ಡಾ. ಬಾಬಾಸಾಹೇಬ್ ಅವರ ತತ್ವ ಸಿದ್ಧಾಂತವನ್ನು ರಕ್ಷಣೆ ಮಾಡಲು ಇದನ್ನು ಹಮ್ಮಿಕೊಳ್ಳಲಾಗಿದೆ. ಪಕ್ಷ ಬೇಧವನ್ನು ಮರೆತು ಕಾಂಗ್ರೆಸ್ ತತ್ವದಲ್ಲಿ ನಂಬಿಕೆಯಿರುವವರು ಮತ್ತು ಅಂಬೇಡ್ಕರರ ತತ್ವ ಮತ್ತು ಸಂವಿಧಾನಕ್ಕೆ ಗೌರವ ಕೊಡುವ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು. ಇತಿಹಾಸ ಪುಟಕ್ಕೆ ಸೇರುವ ಈ ಕಾರ್ಯಕ್ರಮಕ್ಕೆ ಎಲ್ಲರೂ ಸಾಕ್ಷಿಯಾಗಬೇಕು. ಕರ್ನಾಟಕದವಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಲಿದ್ದಾರೆ. ಸುವರ್ಣಸೌಧದ ಎದುರು ಮಹಾತ್ಮಾ ಗಾಂಧಿಜೀಯವರ ಮೂರ್ತಿಯ ಅನಾವರಣದ ಸರ್ಕಾರಿ ಕಾರ್ಯಕ್ರಮಕ್ಕೆ ಎಲ್ಲ ಪಕ್ಷದವರನ್ನು ಆಹ್ವಾನಿಸಲಾಗಿದೆ ಎಂದರು.