Bailahongala

ಗಾಂಧೀಜಿ ಕಲ್ಪನೆಯ ಸ್ವದೇಶಿ, ಗ್ರಾಮ ಸ್ವರಾಜ್ ಬಲಪಡಿಸಲು ಖಾದಿ ಖರೀದಿಸಿ: ಚನ್ನರಾಜ ಹಟ್ಟಿಹೊಳಿ

Share

ಬೈಲಹೊಂಗಲ: ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘದ ಸಹಯೋಗದಲ್ಲಿ ಬೈಲಹೊಂಗಲ ನಗರದಲ್ಲಿ ಆರಂಭಿಸಲಾಗಿರುವ ‘ಖಾದಿಲೂಮ್’ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.

ಕೈಯಿಂದ ನೇಯ್ದ ಖಾದಿ ಹಾಗೂ ರೇಷ್ಮೆ ಬಟ್ಟೆಗಳು ಮಳಿಗೆಯಲ್ಲಿ ಲಭ್ಯವಿವೆ. ಖಾದಿ ಬಟ್ಟೆಗಳಿಗೆ ಪ್ರಾಮುಖ್ಯತೆ ನೀಡಲು ಈ ಮಳಿಗೆ ಆರಂಭಿಸಲಾಗಿದ್ದು, ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಸ್ವದೇಶಿ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಖಾದಿ ಖರೀದಿಸೋಣ. ತನ್ಮೂಲಕ ನೇಕಾರರ ಆರ್ಥಿಕ ಸಂಕಷ್ಟಗಳನ್ನು ಪರಿಹರಿಸೋಣ ಎಂದು ಚನ್ನರಾಜ ಹಟ್ಟಿಹೊಳಿ ಈ ಸಂದರ್ಭದಲ್ಲಿ ಹೇಳಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು‌‌ ಮುರಗೋಡ ಮಹಾಂತ ದುರದುಂಡೇಶ್ವರ ಮಠದ ಶ್ರೀ‌ ನೀಲಕಂಠ ಮಹಾಸ್ವಾಮಿಗಳು, ಹೊಸೂರಿನ ಮಡಿವಾಳೇಶ್ವರ ಮಠದ ಶ್ರೀ ಗಂಗಾಧರ ಮಹಾಸ್ವಾಮಿಗಳು,‌ ನಯಾನಗರ ಸುಖದೇವಾನಂದ ಮಠದ ಶ್ರೀ ಅಭಿನವ ಸಿದ್ಧಲಿಂಗ ಮಹಾಸ್ವಾಮಿಗಳು, ನಿಲಜಿಯ ಶ್ರೀ ಶಿವಾನಂದ ಮಹಾಸ್ವಾಮಿಗಳು, ವೇದಮೂರ್ತಿ ಮಹಾಂತ ಸ್ವಾಮಿ ಆರಾಧ್ರಿಮಠ ವಹಿಸಿದ್ದರು.

ಈ‌ ಸಂದರ್ಭದಲ್ಲಿ ಬೈಲಹೊಂಗಲ ಕ್ಷೇತ್ರದ ಶಾಸಕರಾದ ಮಹಾಂತೇಶ ಕೌಜಲಗಿ, ಹಿರಿಯರಾದ ಗಂಗಣ್ಣ ಕಲ್ಲೂರ್, ಗಿರಿಜಾ ಹಟ್ಟಿಹೊಳಿ, ಮಾಜಿ ಶಾಸಕ ಜಗದೀಶ್ ಮೆಟಗುಡ್, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಮಹಾಂತೇಶ ಮತ್ತಿಕೊಪ್ಪ, ಶಂಕರ ಮಾಡಲಗಿ, ಈಶ್ವರ್ ಹೋಟಿ, ಸುನಿಲ್ ಮರಕುಂಬಿ, ಅಡಿವೇಶ ಇಟಗಿ, ಬಸನಗೌಡ ಪಾಟೀಲ, ರಾಹುಲ್ ಕಲ್ಲೂರ್, ಸೂರಜ್ ಮತ್ತಿಕೊಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:

error: Content is protected !!