ಬೆಳಗಾವಿಯ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಗಸಗಾ ಗ್ರಾಮದಲ್ಲಿ ರಸ್ತೆ ನಿರ್ಮಾಣ ಮತ್ತು ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಗೆ ಚಾಲನೆಯನ್ನು ನೀಡಲಾಯಿತು.

ಕರ್ನಾಟಕ ರಾಜ್ಯ ಸರಕಾರದ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಚಿಕ್ಕೋಡಿ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅವರ ಆಪ್ತ ಸಹಾಯಕರಾದ ಮಲ್ಲಗೌಡ ಪಾಟೀಲ ಅವರು ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಗಸಗಿ ಗ್ರಾಮದಲ್ಲಿ 30 ಲಕ್ಷ ಅನುದಾಣದಲ್ಲಿ ಸಿಸಿ ರಸ್ತೆ ಮತ್ತು 35 ಲಕ್ಷ ರೂಪಾಯಿ ಅನುದಾನದಲ್ಲಿ ಬೀದಿ ದೀಪ ಅಳವಡಿಕೆ ಕಾಮಗಾರಿಗೆ ಚಾಲನೆಯನ್ನು ನೀಡಿದರು.
ಈ ವೇಳೆ ಮಾತನಾಡಿದ ಆಪ್ತ ಸಹಾಯಕ ಮಲಗೌಡ ಪಾಟೀಲ್ ಅವರು ಕನ್ನಡ ಮತ್ತು ಮರಾಠಿ ಶಾಲೆಗಳ ಸುಧಾರಣೆಗಾಗಿ ಸುಮಾರು ಮೂರುವರೆ ಕೋಟಿ ರೂಪಾಯಿಯಲ್ಲಿ ಅಭಿವೃದ್ಧಿಯನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ರಾಜಗೋಳಿ ಬಳಿಯ ರಸ್ತೆಯನ್ನು 1 ವರೆ ಕೋಟಿ ಅನುದಾನದಲ್ಲಿ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ. ಅಲ್ಲದೇ ಗ್ರಾಮದಲ್ಲಿ 35 ಲಕ್ಷ ರೂಪಾಯಿಯಲ್ಲಿ ಸಿಸಿ ರಸ್ತೆ ನಿರ್ಮಾಣ, ಶ್ರೀ ಕಲ್ಮೇಶ್ವರ ದೇವಸ್ಥಾನಕ್ಕೆ ಸಮುದಾಯ ಭವನ ನಿರ್ಮಾಣ, ಅಲ್ಲದೇ ಜಾತ್ರೋತ್ಸವಗಳ ಮೊದಲೇ ಅಭಿವೃದ್ಧಿ ಪರ್ವವನ್ನು ಆರಂಭಿಸಲಾಗಿದೆ. ಸರ್ಕಾರ ಪ್ರತಿಯೊಬ್ಬರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಂಕಲ್ಪವನ್ನು ಮಾಡಿದೆ. ಮಾದರಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯಕ್ಕೆ ವಿಶೇಷ ಕೊಡುಗೆಗಳನ್ನು ನೀಡುತ್ತಿದೆ ಎಂದರು.