ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡ ಗಾಯಾಳುವಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಆಸ್ಪತ್ರೆಗೆ ಸಾಗಿಸಿ ಸಹಾಯ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಿಂದ ಲೋಕಾಪುರ ಮಾರ್ಗವಾಗಿ ಹುಬ್ಬಳ್ಳಿ ಕಡೆ ಹೊರಡುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುವನ್ನು ಅದೇ ಮಾರ್ಗದಲ್ಲಿ ಹೊರಟಿದ್ದ ಸಚಿವ ಸಂತೋಷ ಲಾಡ್ ಅವರು ಕಂಡು ಕೂಡಲೇ ಸಹಾಯಕ್ಕೆ ಧಾವಿಸಿದ್ದಾರೆ.
ಆಂಬುಲೆನ್ಸ್ ಮೂಲಕ ಲೋಕಾಪುರದ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟು, ತಾವು ಕೂಡ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ರೋಗಿಗಳ ಸೇವೆಯನ್ನು ಮಾಡುತ್ತಿರುವ ಅಲ್ಲಿನ ಸಿಬ್ಬಂದಿಗಳಿಗೆ ಸೆಲ್ಯೂಟ್ ಹೇಳಿದ್ದು ವಿಶೇಷವಾಗಿತ್ತು. (ಫ್ಲೋ)
ಸಚಿವ ಸಂತೋಷ ಲಾಡ್ ಅವರು ತುರ್ತುಪರಿಸ್ಥಿತಿಯಲ್ಲಿ ಗಾಯಾಳುವಿಗೆ ಮಾಡಿದ ಸಹಾಯಕ್ಕೆ ಎಲ್ಲರೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ