ಕೇಂದ್ರ ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಅನ್ಯಾಯ ಎಂದು ಸಚಿವ ಶಿವಾನಂದ ಪಾಟೀಲ್ ಬಜೆಟ್ ಕುರಿತು ಅಭಿಪ್ರಾಯ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಸಚಿವ ಶಿವಾನಂದ ಪಾಟೀಲ್ ಪ್ರತಿಕ್ರಿಯೆ ನೀಡಿ ಬಜೆಟ್ ಕುರಿತು ಶಿವಾನಂದ ಪಾಟೀಲ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಬಜೆಟ್ ನಲ್ಲಿ ಏನನ್ನೂ ಕೊಟ್ಟಿಲ್ಲಾ, ಹೆಚ್ಚು ಜಿಎಸ್‌ಟಿ ತೆರಿಗೆ ಕಟ್ಟುವ ರಾಜ್ಯಕ್ಕೆ ಅನ್ಯಾಯವಾಗಿದೆ. ನೀರಾವರಿ, ಕೃಷಿಗೆ ಆದ್ಯತೆಯೆ ಕೊಟ್ಟಿಲ್ಲಾ, ರೈತರಿಗೆ ಸಾಲ ಕೊಡುವ ನಬಾರ್ಡ್ ನೆರವು ಕಡಿಮೆ ಮಾಡಲಾಗಿದೆ ಎಂದಿದ್ದಾರೆ. ಹೆಚ್ಚಿನ ತೆರಿಗೆ ನೀಡುವ ರಾಜ್ಯಗಳಿಗೆ ಅಧ್ಯತೆ ನೀಡಿಲ್ಲಾ, ವಿಮಾನ ನಿಲ್ದಾಣಗಳ ಘೋಷಣೆ ಇಲ್ಲಾ, ವಿತ್ತ ಸಚಿವೆ ವಿಮಲಾಸೀತಾರಾಮ್ ವಿರುದ್ಧ ಸಚಿವ ಶಿವಾನಂದ ಪಾಟೀಲ್ ಅಸಮಧಾನ ಹೊರ ಹಾಕಿದ್ದಾರೆ.