ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ 2025-26 ಅತ್ಯಂತ ಸ್ವಾಗತಾರ್ಹ ಮತ್ತು ಅಭಿವೃದ್ಧಿ ಪರವಾದ ಬಜೆಟ್ ಆಗಿದೆ.
ದೇಶದ ಜನರ ನಿರೀಕ್ಷೆಯಂತೆ ಈ ಬಜೆಟ್ ಅತ್ಯುತ್ತಮವಾಗಿದ್ದು, ರೈತರು, ಉದ್ದಿಮೆದಾರರು, ಮಧ್ಯಮ ವರ್ಗದವರು ಸೇರಿದಂತೆ ಜನಸಾಮಾನ್ಯರ ಅಭಿವೃದ್ಧಿ ಮತ್ತು ಹಿತಾಸಕ್ತಿಯನ್ನು ಆಲೋಚಿಸಿ ಬಜೆಟ್ ಮಂಡನೆ ಮಾಡಿದ್ದಾರೆ.ಇದರಿಂದ ದೇಶದ ಸರ್ವತೋಮುಖ ಅಭಿವೃದ್ಧಿಯಾಗಲಿದೆ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.
ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಈ ಬಜೆಟ್ ವಾಗಿದ್ದು,ಮಧ್ಯಮ ವರ್ಗದ ಜನರ ಬಹು ವರ್ಷಗಳ ಬೇಡಿಕೆಯಾದ ಆದಾಯ ತೆರಿಗೆಗೆ ಸಂಬಂಧಿಸಿದಂತೆ 12 ಲಕ್ಷ ರೂ. ವರೆಗಿನ ಆದಾಯಕ್ಕೆ ತೆರಿಗೆಯಲ್ಲಿ ಸಂಪೂರ್ಣ ವಿನಾಯಿತಿ ನೀಡಿದ್ದು, ಇದರಿಂದ ಬಹುದೊಡ್ಡ ಪ್ರಮಾಣದಲ್ಲಿ ಮಧ್ಯಮ ವರ್ಗದವರಿಗೆ ಅನುಕೂಲವಾಗಿದೆ. ಇಂದಿನ ಬಜೆಟ್ ನಲ್ಲಿ ಅತ್ಯಂತ ಉತ್ತಮ ಬಜೆಟ್ ಆಗಿದೆ.
ಸಂಪೂರ್ಣವಾಗಿ ಕೇಂದ್ರ ಬಜೆಟ್ -2025-26 ಒಂದು ಅಭಿವೃದ್ಧಿಪರ ಮತ್ತು ಜನಸಾಮಾನ್ಯರ ಬಜೆಟ್ ಆಗಿದ್ದು, ಇದರಿಂದ ದೇಶದ ಸರ್ವತೋಮುಖ ಅಭಿವೃದ್ಧಿಯಾಗಲಿದೆ.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 5 ಲಕ್ಷ ಮಹಿಳೆಯರಿಗೆ ಹೊಸ ಉದ್ಯಮ ಸ್ಥಾಪನೆಗೆ ಯೋಜನೆ ಆರಂಭ ಹೀಗೆ ಹತ್ತು ಹಲವು ಕ್ಷೇತ್ರಗಳಿಗೆ, ಸಮುದಾಯಗಳಿಗೆ ಅನುದಾನದ ಮಹಾಪೂರ ಹರಿಸಿರುವ
ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರಿಗೆ ಜನ ಪರ ವಿಕಸಿತ ಬಜೆಟ್ ಗಾಗಿ ಎಲ್ಲಾ ವರ್ಗದವರ ಪರವಾಗಿ ಧನ್ಯವಾದಗಳು ಎಂದು ಶಾಸಕಿ ಶಶಿಕಲಾ ಜೊಲ್ಲೆ ತಿಳಿಸಿದರು