ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ ಹಿರೇಮಠ(50) ತನ್ನದೇ ಧಾಬಾದಲ್ಲಿ ನೇಣಿಗೆ ಶರಣಾಗಿದ್ದಾನೆ.
ನೆಲಕ್ಕೆ ಕಾಲು ತಾಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರೊದ್ರಿಂದ ಮಹಾಂತೇಶ ನೇಣು ಬಿದುಕೊಂಡಿದ್ದಾನೋ ಅಥವಾ ವ್ಯವಸ್ಥಿತ ಕೊಲೆಯೋ ಎಂಬ ಅನುಮಾನ ವ್ಯಕ್ತವಾಗಿವೆ. ಬಬಲೇಶ್ವರ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.